ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೇಟೆಯಲ್ಲಿ ಸಕಾರಾತ್ಮಕ ವಹಿವಾಟು

ಏಕರೂಪದ ತೆರಿಗೆ ವ್ಯವಸ್ಥೆಗೆ ಹೂಡಿಕೆದಾರರಿಂದ ಉತ್ತಮ ಪ್ರತಿಕ್ರಿಯೆ
Last Updated 8 ಜುಲೈ 2017, 19:30 IST
ಅಕ್ಷರ ಗಾತ್ರ

ಮುಂಬೈ: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆಯು ದೇಶದ ಷೇರುಪೇಟೆಗಳಲ್ಲಿ ಹೊಸ ಆಶಾವಾದ ಮೂಡಿಸಿದೆ. ಸಕಾರಾತ್ಮಕ ಮಟ್ಟದಲ್ಲಿ ವಹಿವಾಟು ಅಂತ್ಯವಾಗಿದೆ.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ (ಬಿಎಸ್‌ಇ) ವಾರದ ವಹಿವಾಟಿನಲ್ಲಿ 439 ಅಂಶ ಏರಿಕೆ ಕಂಡು, 31,361 ಅಂಶಗಳಲ್ಲಿ ವಹಿವಾಟು ಅಂತ್ಯಕಂಡಿದೆ.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 145 ಅಂಶ ಹೆಚ್ಚಾಗಿ 9,666 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ಹೂಡಿಕೆದಾರರು ಜಿಎಸ್‌ಟಿ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹೊಸ ವ್ಯವಸ್ಥೆಯಿಂದ ಆರ್ಥಿಕ ಪ್ರಗತಿ ಹೆಚ್ಚಾಗುವ ನಿರೀಕ್ಷೆ ಮಾಡಲಾಗಿದೆ. ಈ ಮೂಲಕ ದೇಶದೊಳಗೆ ಬಂಡವಾಳ ಹೂಡಿಕೆ ಹೆಚ್ಚಾಗಲಿದೆ ಎಂದು ತಜ್ಞರು ಹೇಳಿದ್ದಾರೆ.

ವಾರದ ವಹಿವಾಟಿನಲ್ಲಿ ತ್ವರಿತವಾಗಿ ಮಾರಾಟವಾಗುವ ಗ್ರಾಹಕ ಬಳಕೆ ವಸ್ತುಗಳು (ಎಫ್‌ಎಂಸಿಜಿ) ಹೆಚ್ಚಿನ ಗಳಿಕೆ ಕಂಡುಕೊಂಡಿವೆ.

ಕೆಲವು ಪ್ರಮುಖ ವಲಯಗಳಲ್ಲಿ ಲಾಭ ಗಳಿಕೆ ಉದ್ದೇಶದ ವಹಿವಾಟು ನಡೆದಿದೆ. ಹೀಗಿದ್ದರೂ ಬಿಎಸ್‌ಇ ವಹಿವಾಟು ಹೊಸ ದಾಖಲೆ ಮಟ್ಟದಲ್ಲಿ ಅಂತ್ಯಕಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT