ಶನಿವಾರ, ಡಿಸೆಂಬರ್ 14, 2019
22 °C

ಮೆಟ್ರೊ ಮುಷ್ಕರ ₹ 30 ಲಕ್ಷ ನಷ್ಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೆಟ್ರೊ  ಮುಷ್ಕರ  ₹ 30 ಲಕ್ಷ ನಷ್ಟ

ಬೆಂಗಳೂರು: ‘ಬೆಂಗಳೂರು ಮೆಟ್ರೊ ರೈಲು ನಿಗಮದ (ಬಿಎಂಆರ್‌ಸಿಎಲ್‌) ಸಿಬ್ಬಂದಿ ಶುಕ್ರವಾರ ನಡೆಸಿದ ಮುಷ್ಕರದಿಂದಾಗಿ   91 ಸಾವಿರ ಪ್ರಯಾಣಿಕರು ತೊಂದರೆ ಅನುಭವಿಸಿದ್ದಾರೆ.  ಇದರಿಂದ ₹ 30 ಲಕ್ಷ ನಷ್ಟ ಉಂಟಾಗಿದೆ’ ಎಂದು ನಿಗಮದ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಯು.ಎ.ವಸಂತ ರಾವ್ ತಿಳಿಸಿದರು.

ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಸರ್ಕಾರ ಎಸ್ಮಾ (ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ) ಅಡಿ ಕ್ರಮ ಕೈಗೊಳ್ಳುವ ಮುನ್ನವೇ ಸಿಬ್ಬಂದಿ ಮುಷ್ಕರವನ್ನು ಕೈಬಿಟ್ಟಿದ್ದರು’ ಎಂದರು. 

‘ಮೆಟ್ರೊ  ಭದ್ರತೆಗಾಗಿ ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯ (ಕೆಐಎಸ್‌ಎಫ್‌) ಇನ್ನಷ್ಟು ಸಿಬ್ಬಂದಿಯ ಅಗತ್ಯವಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರತಿಕ್ರಿಯಿಸಿ (+)