ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೇಟೆ ಮೇಲೆ ಹಣದುಬ್ಬರ ಪ್ರಭಾವ

Last Updated 9 ಜುಲೈ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ದೇಶದ ಆರ್ಥಿಕ ಪ್ರಗತಿಯನ್ನು ಸೂಚಿಸುವ ಚಿಲ್ಲರೆ ಹಣದುಬ್ಬರ, ಕೈಗಾರಿಕಾ ಪ್ರಗತಿ ಸೂಚ್ಯಂಕ ಹಾಗೂ ಪ್ರಮುಖ ಕಂಪೆನಿಗಳ ತ್ರೈಮಾಸಿಕ ಫಲಿತಾಂಶವು ಈ ವಾರದ ಷೇರುಪೇಟೆ ಮೇಲೆ ಪ್ರಭಾವ ಬೀರಲಿವೆ ಎಂದು ಪರಿಣತರು ವಿಶ್ಲೇಷಣೆ ಮಾಡಿದ್ದಾರೆ.

ಮೇ ತಿಂಗಳ ಕೈಗಾರಿಕಾ ತಯಾರಿಕಾ ಸೂಚ್ಯಂಕ (ಐಐಪಿ), ಜೂನ್ ತಿಂಗಳ ಗ್ರಾಹಕ ಬೆಲೆ ಸೂಚ್ಯಂಕ ಆಧರಿಸಿದ (ಸಿಪಿಐ) ಚಿಲ್ಲರೆ ಹಣದುಬ್ಬರ ಅಂಕಿ–ಅಂಶಗಳು ಬುಧವಾರ ಪ್ರಕಟವಾಗಲಿವೆ. ಶುಕ್ರವಾರ ಸಗಟು ಹಣದುಬ್ಬರದ ಅಂಕಿ–ಅಂಶ ಹೊರಬೀಳಲಿದೆ.

ಪ್ರಸಕ್ತ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕ ಫಲಿತಾಂಶದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಪ್ರಮುಖ ಕಂಪೆನಿಗಳಾಗಿರುವ ಟಿಸಿಎಸ್‌ ಮತ್ತು ಇನ್ಫೊಸಿಸ್‌ ಆರ್ಥಿಕ ಸಾಧನೆ ಇದೇ ತಿಂಗಳ 13 ಮತ್ತು 14 ರಂದು ಹೊರಬೀಳಲಿವೆ. ಇದು ಆ ಕಂಪೆನಿಗಳ ಷೇರು ಮೌಲ್ಯದಲ್ಲಿ ಏರಿಳಿತಕ್ಕೆ ಕಾರಣವಾಗಲಿದೆ.

ಜಾಗತಿಕ ಮಟ್ಟದಲ್ಲಿ, ಅಮೆರಿಕದಲ್ಲಿ  ಉದ್ಯೋಗ ಸೃಷ್ಟಿಗೆ ಸಂಬಂಧಿಸಿದ ಮಾಹಿತಿ ಶುಕ್ರವಾರ ಪ್ರಕಟವಾಗಲಿದೆ. ಇದು ಸಹ ಷೇರುಪೇಟೆ ಮೇಲೆ ಪ್ರಭಾವ ಬೀರಲಿದೆ.

ಕಳೆದ ವಾರದ ವಹಿವಾಟಿನಲ್ಲಿ ಮುಂಬೈ ಷೇರುಪೇಟೆ  ಸೂಚ್ಯಂಕ 439 ಅಂಶಗಳಷ್ಟು ಮತ್ತು ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 145 ಅಂಶಗಳಷ್ಟು ಏರಿಕೆ ಕಂಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT