ಶುಕ್ರವಾರ, ಡಿಸೆಂಬರ್ 13, 2019
17 °C

ನ್ಯಾಯಾಂಗ ನಿಂದನೆ: ಮಲ್ಯಗೆ ಇಂದು ಶಿಕ್ಷೆ ಪ್ರಕಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನ್ಯಾಯಾಂಗ ನಿಂದನೆ: ಮಲ್ಯಗೆ ಇಂದು ಶಿಕ್ಷೆ ಪ್ರಕಟ

ನವದೆಹಲಿ: ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ನಿಂದನೆಗೆ ಗುರಿಯಾಗಿರುವ  ಉದ್ಯಮಿ ವಿಜಯ ಮಲ್ಯ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ ಶಿಕ್ಷೆಯ ಪ್ರಮಾಣ ನಿಗದಿ ಮಾಡಲಿದೆ.

ನ್ಯಾಯಾಲಯದ ಆದೇಶ ಧಿಕ್ಕರಿಸಿ ಮಕ್ಕಳ ಬ್ಯಾಂಕ್‌ ಖಾತೆಗೆ ₹256 ಕೋಟಿ ಹಣ ವರ್ಗಾಯಿಸಿದ ಪ್ರಕರಣದಲ್ಲಿ ಅವರು ನ್ಯಾಯಾಂಗ ನಿಂದನೆ ಎದುರಿಸುತ್ತಿದ್ದರು. ಅವರಿಗೆ ಗರಿಷ್ಠ ಆರು ತಿಂಗಳು ಶಿಕ್ಷೆಯಾಗುವ ಸಾಧ್ಯತೆ ಇದೆ.

ಎಸ್‌ಬಿಐ ನೇತೃತ್ವದ ಬ್ಯಾಂಕ್‌ಗಳ ಒಕ್ಕೂಟ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಮಾರ್ಚ್‌ನಲ್ಲಿ  ಪೂರ್ಣಗೊಳಿಸಿದ್ದ ಸುಪ್ರೀಂ ಕೋರ್ಟ್ ಮೇ 9ರಂದು ಮಲ್ಯ ಅವರನ್ನು ತಪ್ಪಿತಸ್ಥ ಎಂದು ಘೋಷಿಸಿತ್ತು.

ಅಪೂರ್ಣ ಆಸ್ತಿ ವಿವರ ಸಲ್ಲಿಸಿದ ಪ್ರಕರಣದಲ್ಲೂ ಅವರ ವಿರುದ್ಧದ ಆರೋಪವನ್ನು ನ್ಯಾಯಾಲಯ ಎತ್ತಿ ಹಿಡಿದಿತ್ತು. ಆದರೆ, ಈ ಆರೋಪವನ್ನು ಮಲ್ಯ ತಳ್ಳಿ ಹಾಕಿದ್ದರು. ಜುಲೈ 10ರಂದು ಶಿಕ್ಷೆಯ ಪ್ರಮಾಣ  ನಿಗದಿಗೆ  ವಾದ ಮಂಡನೆ ಆರಂಭವಾಗುವುದರಿಂದ ನ್ಯಾಯಾಲಯದ ಎದುರು ಖುದ್ದು ಹಾಜರಾಗುವಂತೆ  ಮಲ್ಯ ಅವರಿಗೆ ಸುಪ್ರೀಂ ಕೋರ್ಟ್‌ ಸೂಚಿಸಿತ್ತು.

ಪ್ರತಿಕ್ರಿಯಿಸಿ (+)