ಶುಕ್ರವಾರ, ಡಿಸೆಂಬರ್ 13, 2019
20 °C

ಬೀಳಗಿ ಕ್ಷೇತ್ರದ ಮಾಜಿ ಶಾಸಕ ಎಸ್.ಎಸ್.ಪಾಟೀಲ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀಳಗಿ ಕ್ಷೇತ್ರದ ಮಾಜಿ ಶಾಸಕ  ಎಸ್.ಎಸ್.ಪಾಟೀಲ ನಿಧನ

ಬಾಗಲಕೋಟೆ: ಬೀಳಗಿ ಕ್ಷೇತ್ರದ ಮಾಜಿ ಶಾಸಕ ಸಿದ್ಧನಗೌಡ ಸೋಮನಗೌಡ ಪಾಟೀಲ (ಎಸ್.ಎಸ್.ಪಾಟೀಲ) ಭಾನುವಾರ ಬೆಳಿಗ್ಗೆ 6 ಗಂಟೆಗೆ ನಿಧನರಾದರು. ನಗರದ ವಿದ್ಯಾಗಿರಿಯಲ್ಲಿ ವಾಸವಿದ್ದ ಅವರು, ತಮ್ಮ 90ನೇ ಹುಟ್ಟುಹಬ್ಬದ ದಿನವೇ ಸಾವಿಗೀಡಾಗಿದ್ದಾರೆ.

ಅವರಿಗೆ ಪತ್ನಿ, ಪುತ್ರ ಮತ್ತು ನಾಲ್ವರು ಪುತ್ರಿಯರು ಇದ್ದಾರೆ. ಬೀಳಗಿ ಪಟ್ಟಣದ ನಿವಾಸಿಯಾದ ಎಸ್‌.ಎಸ್.ಪಾಟೀಲ, ಮುಂಬೈ ಸರ್ಕಾರದಲ್ಲಿ ಕೆಲಕಾಲ ಪೊಲೀಸ್ ಅಧಿಕಾರಿಯಾಗಿದ್ದರು. ನಂತರ ಕೆಲಸಕ್ಕೆ ರಾಜೀನಾಮೆ ನೀಡಿ ರಾಜಕೀಯ ಪ್ರವೇಶಿಸಿದ್ದರು. 1978 ಮತ್ತು 1983ರಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ, ಬೀಳಗಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.

ಅವಿಭಜಿತ ವಿಜಯಪುರ ಜಿಲ್ಲೆ ಕಾಂಗ್ರೆಸ್ ಜಿಲ್ಲಾ ಘಟಕದ ಕಾರ್ಯದರ್ಶಿಯಾಗಿದ್ದ ಎಸ್.ಎಸ್.ಪಾಟೀಲ, ಬೀಳಗಿ ಪಿ.ಎಲ್.ಡಿ. ಬ್ಯಾಂಕ್ ಮತ್ತು ತಾಲ್ಲೂಕು ಕೃಷಿ ಪತ್ತಿನ ಸಹಕಾರ ಸಂಘದ (ಟಿಎಪಿಎಂಎಸ್) ಅಧ್ಯಕ್ಷರಾಗಿದ್ದರು.

ಬೀಳಗಿಯಲ್ಲಿ ಸಂಜೆ ಅಂತ್ಯಕ್ರಿಯೆ ನಡೆಯಿತು.

ಪ್ರತಿಕ್ರಿಯಿಸಿ (+)