ಭಾನುವಾರ, ಡಿಸೆಂಬರ್ 8, 2019
21 °C

ಹುಣಸಮಾರನಹಳ್ಳಿ:ಗ್ರಾಮಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಣಸಮಾರನಹಳ್ಳಿ:ಗ್ರಾಮಸಭೆ

ಬೆಂಗಳೂರು: ಬ್ಯಾಟರಾಯನಪುರ ಕ್ಷೇತ್ರ ವ್ಯಾಪ್ತಿಯ ಹುಣಸಮಾರನಹಳ್ಳಿ ಗ್ರಾಮ ಪಂಚಾಯಿತಿಯ 2017–18ನೇ ಸಾಲಿನ ಗ್ರಾಮಸಭೆ ನಡೆಯಿತು.

ಸಭೆ ಬಳಿಕ ಹಿರಿಯ ನಾಗರಿಕರಿಗೆ ಗುರುತಿನ ಚೀಟಿ, ಟೈಲರಿಂಗ್‌ ತರಬೇತಿ ಪೂರ್ಣಗೊಳಿಸಿದವರಿಗೆ ಪ್ರಮಾಣಪತ್ರ ಮತ್ತು ಕೃಷಿ ಇಲಾಖೆಯಿಂದ ರೈತರಿಗೆ ಬಿತ್ತನೆ ಬೀಜ ಹಾಗೂ ಕೃಷಿ ಯಂತ್ರೋಪಕರಣಗಳನ್ನು ವಿತರಿಸಲಾಯಿತು.

ಕೃಷಿ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, ‘ಹುಣಸಮಾರನಹಳ್ಳಿ ಭಾಗದಲ್ಲಿ ತಲೆಯೆತ್ತಿರುವ ನೂತನ ಬಡಾವಣೆಗಳಲ್ಲಿ ಸಣ್ಣ ಜಾಗದಲ್ಲಿ 3–4 ಅಂತಸ್ತಿನ ಕಟ್ಟಡಗಳನ್ನು ಕಟ್ಟಿಕೊಂಡಿದ್ದಾರೆ. ರಸ್ತೆ, ಪಾದಚಾರಿ ಮಾರ್ಗಕ್ಕೆ ಸರಿಯಾದ ಜಾಗ ಬಿಟ್ಟಿಲ್ಲ.  ವಾಹನ ನಿಲುಗಡೆಗೂ ಅವಕಾಶವಿಲ್ಲ. ಹೀಗಾದರೆ ಮೂಲಸೌಲಭ್ಯಗಳನ್ನು ಒದಗಿಸುವುದು ಹೇಗೆ? ಈ ಬಗ್ಗೆ ಸಾರ್ವಜನಿಕರು ಆಲೋಚನೆ ಮಾಡಬೇಕು’ ಎಂದು ಸಲಹೆ ನೀಡಿದರು.

‘ಹುಣಸಮಾರನಹಳ್ಳಿಯಿಂದ ಕೋಡಗಲಹಟ್ಟಿ ಮಾರ್ಗವಾಗಿ ಹೊಸಹಳ್ಳಿಯವರೆಗೆ ರಸ್ತೆಯ ಡಾಂಬರೀಕರಣಕ್ಕೆ ₹1.6 ಕೋಟಿ ಅನುದಾನ ಮಂಜೂರಾಗಿದೆ. ಟೆಂಡರ್‌ ಪ್ರಕ್ರಿಯೆ ಮುಗಿದಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡಲಾಗುತ್ತದೆ’ ಎಂದರು.

ಪ್ರತಿಕ್ರಿಯಿಸಿ (+)