ಸೋಮವಾರ, ಡಿಸೆಂಬರ್ 16, 2019
17 °C

ಮಡಿಕೇರಿ ಜಿಲ್ಲೆಯಲ್ಲಿ ಅಕ್ರಮ ಆಸ್ತಿ: ಡಿವಿಎಸ್, ಶೋಭಾ ವಿರುದ್ಧ ಇಡಿ ತನಿಖೆ ನಡೆಯಲಿ– ಸಚಿವ ಬಿ.ರಮಾನಾಥ್ ರೈ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ ಜಿಲ್ಲೆಯಲ್ಲಿ ಅಕ್ರಮ ಆಸ್ತಿ: ಡಿವಿಎಸ್, ಶೋಭಾ ವಿರುದ್ಧ ಇಡಿ ತನಿಖೆ ನಡೆಯಲಿ– ಸಚಿವ ಬಿ.ರಮಾನಾಥ್ ರೈ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಘರ್ಷಣೆಗೆ ಪ್ರಚೋದನೆ ನೀಡುತ್ತಿರುವ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಮತ್ತು ಸಂಸದೆ ಶೋಭಾ ಕರಂದ್ಲಾಜೆ ಮಡಿಕೇರಿ ಜಿಲ್ಲೆಯಲ್ಲಿ ಮಾಡಿರುವ‌ ಅಕ್ರಮ ಆಸ್ತಿಗಳ ವಿರುದ್ಧ ಜಾರಿ ನಿರ್ದೇಶನಾಲಯದಿಂದ ತನಿಖೆ ನಡೆಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಆಗ್ರಹಿಸಿದರು.

ಜಿಲ್ಲೆಯಲ್ಲಿ ಶಾಂತಿ ಕಾಪಾಡಲು ಏನೂ ಮಾಡದ ಈ ಇಬ್ಬರು, ಶಾಂತಿ ಕದಡಲು ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದಾರೆ.ಇಬ್ಬರೂ ಮಡಿಕೇರಿಯಲ್ಲಿ ಬೇನಾಮಿಯಾಗಿ ಆಸ್ತಿ ಸಂಪಾದಿಸಿಕೊಂಡು ಜಿಲ್ಲೆಯಲ್ಲಿ ಶಾಂತಿ ಕದಡುವ ರಾಜಕಾರಣ ಮಾಡುತ್ತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

'ಸದಾನಂದ ಗೌಡ ಮತ್ತು ಶೋಭಾ ನನ್ನ ಹಾಗೂ ಸಚಿವ ಯು.ಟಿ.ಖಾದರ್ ವಿರುದ್ಧ ಸುಳ್ಳು ಆರೋಪ‌ ಮಾಡುತ್ತಿದ್ದಾರೆ. ಇಬ್ಬರೂ ನಮ್ಮ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಲಿ' ಎಂದು ಸವಾಲು ಹಾಕಿದರು.

ದಕ್ಷಿಣ ಕನ್ನಡದಲ್ಲಿ ಶಾಂತಿ ಕಾಪಾಡಲು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಲ್ಲ ಪಕ್ಷಗಳ ಚುನಾಯಿತ ಪ್ರತಿನಿಧಿಗಳ ಸಭೆ ನಡೆಸಲಾಗುವುದು ಎಂದು ಹೇಳಿದರು.

ಪ್ರತಿಕ್ರಿಯಿಸಿ (+)