ಸೋಮವಾರ, ಡಿಸೆಂಬರ್ 16, 2019
26 °C

ಮಾತುಕತೆಗೆ ಪಾಕ್‌ ಉತ್ಸುಕ: ಅಜೀಜ್‌

ಪಿಟಿಐ Updated:

ಅಕ್ಷರ ಗಾತ್ರ : | |

ಮಾತುಕತೆಗೆ ಪಾಕ್‌ ಉತ್ಸುಕ: ಅಜೀಜ್‌

ಇಸ್ಲಾಮಾಬಾದ್‌:  ಭಾರತದೊಂದಿಗೆ ಮಾತುಕತೆ ನಡೆಸುವ ಮೂಲಕ  ಕಾಶ್ಮೀರ ವಿವಾದ ಸೇರಿದಂತೆ ಎಲ್ಲ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಪಾಕಿಸ್ತಾನ ಉತ್ಸುಕವಾಗಿದೆ ಎಂದು ಪ್ರಧಾನಿ ನವಾಜ್‌ ಶರೀಫ್‌ ಅವರ ವಿದೇಶಾಂಗ ವ್ಯವಹಾರಗಳ ಸಲಹೆಗಾರ ಸರ್ತಾಜ್‌ ಅಜೀಜ್‌ ತಿಳಿಸಿದ್ದಾರೆ.

ಉಭಯ ದೇಶಗಳು ಪರಸ್ಪರ ಮಾತುಕತೆ ನಡೆಸುವುದರಿಂದ ಆ ಭಾಗದಲ್ಲಿ ಶಾಂತಿ ಮರುಸ್ಥಾಪಿಸಬಹುದು ಎಂದು ಅವರು ಹೇಳಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಗಡಿ ನಿಯಂತ್ರಣ ರೇಖೆ ಬಳಿ ಉದ್ವಿಗ್ನ ಪರಿಸ್ಥಿತಿ ಹೆಚ್ಚುತ್ತಿರುವ ಬೆನ್ನಲ್ಲೇ ಅವರು ಈ ರೀತಿ ಹೇಳಿಕೆ ನೀಡಿರುವುದು ಕುತೂಹಲ ಮೂಡಿಸಿದೆ.

ಕಾಶ್ಮೀರದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ. ಈ ವಿಷಯ ಮರೆಮಾಚುವ ಸಲುವಾಗಿ ಭಾರತ ಗಡಿ ನಿಯಂತ್ರಣ ರೇಖೆಯಲ್ಲಿ ಉದ್ವಿಗ್ನತೆ ಹೆಚ್ಚುವಂತೆ ಮಾಡುತ್ತಿದೆ. ಕಳೆದ ಒಂದು ವರ್ಷದಲ್ಲಿ ಭಾರತ 450 ಬಾರಿ ಕದನ ವಿರಾಮ ಉಲ್ಲಂಘಿಸಿದೆ ಎಂದು ಅವರು ಆರೋಪಿಸಿದ್ದಾರೆ.

ಭಾರತದಿಂದ ಸ್ವಾತಂತ್ರ್ಯ ದೊರಕುವವರೆಗೂ ಕಾಶ್ಮೀರಿಗಳಿಗೆ ಪಾಕಿಸ್ತಾನ ರಾಜಕೀಯ, ನೈತಿಕ ಹಾಗೂ ರಾಜತಾಂತ್ರಿಕ ಬೆಂಬಲ ನೀಡುತ್ತದೆ ಎಂದು ಅಜೀಜ್‌ ಇದೇ ವೇಳೆ ಹೇಳಿದ್ದಾರೆ.

ಪ್ರತಿಕ್ರಿಯಿಸಿ (+)