ಶುಕ್ರವಾರ, ಡಿಸೆಂಬರ್ 6, 2019
19 °C

‘ನಾನು ಸಂಜಯ್‌ ಗಾಂಧಿ ಪುತ್ರಿ’: ಸುದ್ದಿಗೋಷ್ಠಿ ನಡೆಸಿದ ಮಹಿಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‘ನಾನು ಸಂಜಯ್‌ ಗಾಂಧಿ ಪುತ್ರಿ’: ಸುದ್ದಿಗೋಷ್ಠಿ ನಡೆಸಿದ ಮಹಿಳೆ

ನವದೆಹಲಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಕಿರಿಯ ಪುತ್ರ ಸಂಜಯ್‌ ಗಾಂಧಿ ಅವರ ಮಗಳು ಎಂದು ಹೇಳಿಕೊಂಡಿರುವ ಮಹಿಳೆಯೊಬ್ಬರು, ಈ ತಿಂಗಳ ಕೊನೆಗೆ ಬಿಡುಗಡೆಯಾಗಲಿರುವ ‘ಇಂದು ಸರ್ಕಾರ್‌’ ಚಲನಚಿತ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ ನಾಯಕರಾಗಿದ್ದ ತಮ್ಮ ತಂದೆ ಹಾಗೂ ಇಂದಿರಾ ಗಾಂಧಿ ಅವರನ್ನು ಚಿತ್ರದಲ್ಲಿ ಅತ್ಯಂತ ಕೆಟ್ಟದಾಗಿ ಬಿಂಬಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

48 ವರ್ಷದ ಪ್ರಿಯಾ ಸಿಂಗ್‌ ಪಾಲ್‌ ಎಂಬ ಮಹಿಳೆ ಸೋಮವಾರ ಸುದ್ದಿಗೋಷ್ಠಿ ನಡೆಸಿ, ತಮ್ಮ ತಂದೆಯನ್ನು ತಪ್ಪಾಗಿ ಬಿಂಬಿಸಲು ಹೊರಟಿರುವುದರಿಂದ ತಾವು ಮೌನ ಮುರಿಯಬೇಕಾಯಿತು ಎಂದು ಹೇಳಿದ್ದಾರೆ.

ಪ್ರತಿಕ್ರಿಯಿಸಿ (+)