ಭಾನುವಾರ, ಡಿಸೆಂಬರ್ 8, 2019
21 °C

ಮಸೂದೆಗೆ ಬೆಂಬಲ ನೀಡದಿದ್ದರೆ ಹೋರಾಟ: ಬಿಜೆಪಿ ಎಚ್ಚರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಸೂದೆಗೆ ಬೆಂಬಲ ನೀಡದಿದ್ದರೆ ಹೋರಾಟ: ಬಿಜೆಪಿ ಎಚ್ಚರಿಕೆ

ಬೆಂಗಳೂರು: ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗಕ್ಕೆ ಹೆಚ್ಚಿನ ಅಧಿಕಾರ ನೀಡುವ ಉದ್ದೇಶದಿಂದ  ಕೇಂದ್ರ ಸರ್ಕಾರ ರೂಪಿಸಿರುವ ತಿದ್ದುಪಡಿ ಮಸೂದೆಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬೆಂಬಲ ನೀಡದೇ ಇದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಬೇಕಾಗುತ್ತದೆ ಎಂದು ಬಿಜೆಪಿ ಹಿಂದುಳಿದ ಮೋರ್ಚಾ ಅಧ್ಯಕ್ಷ ಬಿ.ಜೆ. ಪುಟ್ಟಸ್ವಾಮಿ ಎಚ್ಚರಿಸಿದರು.

‘ಹಿಂದುಳಿದವರಿಗೆ ಸಿಗಬೇಕಾದ ನ್ಯಾಯಯುತ ಸೌಲಭ್ಯ ಕಲ್ಪಿಸುವ ಉದ್ದೇಶಕ್ಕೆ ತರುತ್ತಿರುವ ಮಸೂದೆ ಬಗ್ಗೆ  ಹಿಂದುಳಿದ ವರ್ಗಗಳ ರಾಜ್ಯ ಆಯೋಗದ ಅಧ್ಯಕ್ಷ ಕಾಂತರಾಜ ಅವರು ಅನಗತ್ಯ ಟೀಕೆ ಮಾಡುತ್ತಿದ್ದಾರೆ.

ರಾಜ್ಯದ ಅಧಿಕಾರ ಮೊಟಕು ಮಾಡುವ ಯಾವುದೇ ಉದ್ದೇಶ ಕೇಂದ್ರಕ್ಕೆ ಇಲ್ಲ’ ಎಂದು ಅವರು ಮಾಧ್ಯಮ ಗೋಷ್ಠಿಯಲ್ಲಿ ಸೋಮವಾರ  ಪ್ರತಿಪಾದಿಸಿದರು.

‘ಸಿದ್ದರಾಮಯ್ಯ ಅವರ ಅಣತಿಯಂತೆ ಕಾಂತರಾಜ ಹೇಳಿಕೆ ನೀಡುತ್ತಿದ್ದಾರೆ. ನಾನು ಹಿಂದುಳಿದ ವರ್ಗಗಳ ಪರ ಎಂದು ಘೋಷಿಸುವ ಮುಖ್ಯಮಂತ್ರಿ ಈ ವಿಷಯದಲ್ಲಿ ಅಡ್ಡಗಾಲು ಹಾಕುತ್ತಿದ್ದಾರೆ.  ಈ ಮಸೂದೆಗೆ ಒಪ್ಪಿಗೆ ಸೂಚಿಸುವಂತೆ ಕರ್ನಾಟಕವನ್ನು ಪ್ರತಿನಿಧಿಸುವ ಎಲ್ಲ ರಾಜ್ಯಸಭಾ ಸದಸ್ಯರಿಗೂ ಮುಖ್ಯಮಂತ್ರಿ ಕೂಡಲೇ ಪತ್ರ ಬರೆಯಬೇಕು’ ಎಂದು ಆಗ್ರಹಿಸಿದರು.

‘ರಾಜ್ಯ ಸರ್ಕಾರದ ಅಧಿಕಾರ ಕಿತ್ತುಕೊಳ್ಳುವ ಒಂದೇ ಒಂದು ಶಬ್ದ ಮಸೂದೆಯಲ್ಲಿ ಇಲ್ಲ. ಜನರನ್ನು ದಿಕ್ಕು ತಪ್ಪಿಸಲು ಕಾಂಗ್ರೆಸ್‌ ಸರ್ಕಾರ ಸುಳ್ಳು ಹೇಳುತ್ತಿದೆ’ ಎಂದು ದೂರಿದರು.

ಪ್ರತಿಕ್ರಿಯಿಸಿ (+)