ಭಾನುವಾರ, ಡಿಸೆಂಬರ್ 15, 2019
18 °C

ಯಲಹಂಕದ ಪಿಯು ಕಾಲೇಜಿನಲ್ಲಿ ಕೊಠಡಿಗಳ ಉದ್ಘಾಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಲಹಂಕದ ಪಿಯು ಕಾಲೇಜಿನಲ್ಲಿ ಕೊಠಡಿಗಳ ಉದ್ಘಾಟನೆ

ಬೆಂಗಳೂರು: ಎಂಬೆಸಿ ಗ್ರೂಪ್‌ ಸಂಸ್ಥೆಯು  ಬಿ.ಎಲ್‌.ಕಶ್ಯಪ್‌ ಅಂಡ್‌ ಸನ್ಸ್‌ ಲಿಮಿಟೆಡ್‌ನ ಸಹಯೋಗದಲ್ಲಿ ಯಲಹಂಕದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಿರ್ಮಿಸಿರುವ ನೂತನ ಕೊಠಡಿಗಳನ್ನು ಸೋಮವಾರ ಉದ್ಘಾಟಿಸಲಾಯಿತು.

₹1.62 ಕೋಟಿ ವೆಚ್ಚದಲ್ಲಿ 10 ಕೊಠಡಿಗಳನ್ನು ನಿರ್ಮಿಸಲಾಗಿದೆ. ಕೊಠಡಿಗಳಲ್ಲಿ ಫ್ಯಾನ್‌, ವಿದ್ಯುತ್‌ದೀಪ ಹಾಗೂ ಹಸಿರು ಬೋರ್ಡ್‌ಗಳನ್ನು ಅಳವಡಿಸಲಾಗಿದೆ.

ಎಂಬೆಸಿ ಗ್ರೂಪ್ ಅಧ್ಯಕ್ಷ ಜೀತು ವಿರ್ವಾನಿ, ‘ಖಾಸಗಿ ಶಾಲಾ–ಕಾಲೇಜು ವಿದ್ಯಾರ್ಥಿಗಳಿಗೆ ಸಿಗುವ ಸೌಲಭ್ಯಗಳು ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳಿಗೂ ದೊರೆಯಬೇಕು. ಸಮಾಜದಿಂದ ಪಡೆದಿದ್ದನ್ನು ಮತ್ತೆ ಸಮಾಜಕ್ಕೆ ಹಿಂತಿರುಗಿಸಬೇಕೆಂಬ ಉದ್ದೇಶದಿಂದ ಈ ಕಾರ್ಯವನ್ನು ಕೈಗೊಳ್ಳಲಾಗಿದೆ’ ಎಂದರು.

‘ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ವಿದ್ಯಾವಂತರಾಗಬೇಕು. ಬಳಿಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಶಾಸಕ ಎಸ್‌.ಆರ್‌.ವಿಶ್ವನಾಥ್‌, ‘ಕಾಲೇಜಿನಲ್ಲಿ 2,700 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಆದರೆ, ವಿದ್ಯಾರ್ಥಿಗಳಿಗೆ ಅನುಗುಣವಾಗಿ ಕೊಠಡಿಗಳ ಸಂಖ್ಯೆ ಕಡಿಮೆ ಇತ್ತು. ಎಂಬೆಸಿ ಗ್ರೂಪ್‌ನವರು ಗುಣಮಟ್ಟದ ಕೊಠಡಿಗಳನ್ನು ನಿರ್ಮಿಸಿಕೊಟ್ಟಿದ್ದಾರೆ’ ಎಂದು ಶ್ಲಾಘಿಸಿದರು.

ಪ್ರತಿಕ್ರಿಯಿಸಿ (+)