ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಂಥಾಲಯ ಸ್ಥಾಪನೆಗೆ ಗ್ರಾಮಸ್ಥರ ಆಗ್ರಹ

Last Updated 10 ಜುಲೈ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಚಿಕ್ಕಬಾಣಾವರದಲ್ಲಿ ಸಾರ್ವಜನಿಕ ಗ್ರಂಥಾಲಯ ಸ್ಥಾಪಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

‘ಗ್ರಾಮ ಪಂಚಾಯಿತಿಯ ಕಚೇರಿಯಲ್ಲಿ 500 ಪುಸ್ತಕಗಳಿವೆ. ಆದರೆ, ಪುಸ್ತಕಗಳು ದೂಳು ಹಿಡಿದಿವೆ. ಗ್ರಾಮದಲ್ಲಿ ಓದುವ ಹವ್ಯಾಸವುಳ್ಳ ಸಾಕಷ್ಟು ಜನರಿದ್ದಾರೆ. ಗ್ರಂಥಾಲಯ ಸ್ಥಾಪಿಸುವಂತೆ ಐದು ವರ್ಷಗಳಿಂದ ಒತ್ತಾಯಿಸುತ್ತಾ ಬಂದಿದ್ದೇವೆ. ಆದರೆ, ಯಾವುದೇ ಪ್ರಯೋಜನವಾಗಿಲ್ಲ’ ಎಂದು ನೇತ್ರಾವತಿ ದೂರಿದ್ದಾರೆ.

ಗ್ರಾ.ಪಂ.ಸದಸ್ಯ ಮಹಮ್ಮದ್ ಅಲಿ, ‘ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆರು ಕೊಠಡಿಗಳು ಖಾಲಿ ಇವೆ. ಅಲ್ಲಿ ಗ್ರಂಥಾಲಯ ಸ್ಥಾಪಿಸಿ, ಪುಸ್ತಕ ವಿಭಾಗ ಮತ್ತು ಸುದ್ದಿ ವಿಭಾಗಗಳನ್ನು ತೆರೆಯಬೇಕು. ಇದರಿಂದ ಸಾರ್ವಜನಿಕರಿಗೆ ಉಪಯುಕ್ತವಾಗಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT