ಭಾನುವಾರ, ಡಿಸೆಂಬರ್ 15, 2019
21 °C

ವೈದ್ಯ ಸೀಟು: ನೋಂದಣಿ ಜುಲೈ15ರವರೆಗೆ ವಿಸ್ತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವೈದ್ಯ ಸೀಟು: ನೋಂದಣಿ  ಜುಲೈ15ರವರೆಗೆ ವಿಸ್ತರಣೆ

ಬೆಂಗಳೂರು: ಕರ್ನಾಟಕದಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸೀಟು ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ನೋಂದಣಿ ಮಾಡಿಕೊಳ್ಳುವ ಅವಧಿಯನ್ನು ಜುಲೈ 15ರವರೆಗೆ ವಿಸ್ತರಿಸಲಾಗಿದೆ.

ನೀಟ್ ಮೆರಿಟ್ ಮಾತ್ರ ಪಡೆದ ವಿದ್ಯಾರ್ಥಿಗಳಿಗೆ ದಾಖಲಾತಿ ಪರಿಶೀಲನೆ ಮಂಗಳವಾರ (ಜುಲೈ 11)ಬೆಳಿಗ್ಗೆ 9.15ರಿಂದ ಆರಂಭವಾಗುತ್ತದೆ. ಬೆಂಗಳೂರು, ಮೈಸೂರು, ಶಿವಮೊಗ್ಗ, ದಾವಣಗೆರೆ, ಬೆಳಗಾವಿ, ಧಾರವಾಡ, ಬಳ್ಳಾರಿ ಮತ್ತು ಕಲಬುರ್ಗಿಯಲ್ಲಿ ಮಾತ್ರ ದಾಖಲಾತಿ ಪರಿಶೀಲನೆ ನಡೆಯುತ್ತದೆ.

ಅನಿವಾಸಿ ಭಾರತೀಯ ಮತ್ತು ಹೊರರಾಜ್ಯಗಳ ವಿದ್ಯಾರ್ಥಿಗಳಿಗೆ ಬೆಂಗಳೂರಿನಲ್ಲಿ ಮಾತ್ರ ದಾಖಲಾತಿ ಪರಿಶೀಲನೆ ನಡೆಯಲಿದೆ. ವಿವರಗಳಿಗೆ ಪ್ರಾಧಿಕಾರದ ವೆಬ್‌ಸೈಟ್‌ (http://kea.kar.nic.in) ವೀಕ್ಷಿಸಬಹುದು.

ಪ್ರತಿಕ್ರಿಯಿಸಿ (+)