ಭಾನುವಾರ, ಡಿಸೆಂಬರ್ 8, 2019
21 °C

ದಕ್ಷಿಣ ಕನ್ನಡ ಜಿಲ್ಲೆಯ ವಿಚಾರ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸುವೆ: ಡಿ.ವಿ.ಸದಾನಂದ ಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಕ್ಷಿಣ ಕನ್ನಡ ಜಿಲ್ಲೆಯ ವಿಚಾರ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸುವೆ: ಡಿ.ವಿ.ಸದಾನಂದ ಗೌಡ

ಮಂಗಳೂರು: ‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಕುರಿತು ಬುಧವಾರ ನಡೆಯುವ ಕೇಂದ್ರ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಿ, ಜಿಲ್ಲೆಯ ಸಚಿವರಿಬ್ಬರು ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿರುವುದನ್ನು ಮನವರಿಕೆ ಮಾಡುವೆ’ ಎಂದು ಕೇಂದ್ರ ಯೋಜನೆ ಮತ್ತು ಸಾಂಖ್ಯಿಕ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ತಿಳಿಸಿದರು.

ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೃತ ಶರತ್‌ ಮಡಿವಾಳ ಮನೆಗೆ ಭೇಟಿನೀಡಿ ಸಾಂತ್ವನ ಹೇಳಿದ್ದೇನೆ. ಆ ಬಳಿಕ ಜಿಲ್ಲಾಧಿಕಾರಿ ಮತ್ತು ಜಿಲ್ಲೆಯ ಪೊಲೀಸ್‌ ಅಧಿಕಾರಿಗಳ ಸಭೆ ನಡೆಸಿ ಇತ್ತೀಚಿನ ಘಟನೆಗಳ ಬಗ್ಗೆ ಮಾಹಿತಿ ಪಡೆದಿದ್ದೇನೆ. ಈ ಸಂಬಂಧ ವಿಸ್ತೃತವಾದ ವರದಿಯನ್ನು ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಸಲ್ಲಿಸುವೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆಯುವ ಸಂಪುಟ ಸಭೆಯಲ್ಲೂ ಈ ಬಗ್ಗೆ ಪ್ರಸ್ತಾಪಿಸುವೆ’ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಮತ್ತು ಸಚಿವ ಯು.ಟಿ.ಖಾದರ್‌ ಅವರ ಅಧಿಕಾರ ದಾಹಕ್ಕೆ ಜಿಲ್ಲೆ ಬಲಿಯಾಗುತ್ತಿದೆ. ಜಿಲ್ಲೆಯಲ್ಲಿ ಆಡಲಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ರಮಾನಾಥ ರೈ ಮತ್ತು ಖಾದರ್‌ ನೇರವಾಗಿ ಘರ್ಷಣೆಗಳಿಗೆ ಪ್ರಚೋದನೆ ನೀಡುತ್ತಿದ್ದಾರೆ. ದುರಹಂಕಾರಿ ಆಡಳಿತ ವೈಖರಿಯೇ ಈಗಿನ ಪರಿಸ್ಥಿತಿಗೆ ಕಾರಣ ಎಂದು ವಾಗ್ದಾಳಿ ನಡೆಸಿದರು.

ಪ್ರತಿಕ್ರಿಯಿಸಿ (+)