ಸೋಮವಾರ, ಡಿಸೆಂಬರ್ 16, 2019
23 °C

ಅರುಣಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತಕ್ಕೆ 14 ಮಂದಿ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ಅರುಣಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತಕ್ಕೆ 14 ಮಂದಿ ಸಾವು

ಇಟಾನಗರ: ಅರುಣಾಚಲ ಪ್ರದೇಶದಲ್ಲಿ ಭಾರೀ ಮಳೆಸುರಿಯುತ್ತಿದ್ದು, ಪಪುಮಾ ಪಾರೆ ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಮಂಗಳವಾರ ಭೂಕುಸಿತ ಸಂಭವಿಸಿ 14 ಜನ ಮೃತಪಟ್ಟಿದ್ದಾರೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ಭೂಕುಸಿತದ ಮಣ್ಣಿನ ಅಡಿ ಸಿಲುಕಿ ಬದುಕುಳಿದಿರಬಹುದಾದವರಿಗಾಗಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಹೆಚ್ಚುವರಿ ಡಿಸಿ ಜಲಾಶ್ ಅರ್ಟಿನ್‌ ಹೇಳಿದ್ದಾರೆ.

ಮಧ್ಯಾಹ್ನ 3.30ರ ಸುಮಾರಿಗೆ ಭೂಕುಸಿತ ಸಂಭವಿಸಿದ್ದು, ಮೂರು ಮನೆಗಳು ಮಣ್ಣಿನಲ್ಲಿ ಮುಚ್ಚಿಕೊಂಡಿವೆ.

ಪಪುಮಾ ಪಾರೆಯಲ್ಲಿ ನಾಲ್ಕು ದಿನಗಳಿಂದ ಭಾರೀ ಮಳೆ ಬಿದ್ದಿದೆ.

ಪ್ರತಿಕ್ರಿಯಿಸಿ (+)