ಭಾನುವಾರ, ಡಿಸೆಂಬರ್ 8, 2019
21 °C

ಜಮ್ಮು–ಕಾಶ್ಮೀರದಲ್ಲಿ ಉಗ್ರರರ ಮೇಲೆ ಭದ್ರತಾ ಪಡೆ ದಾಳಿ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಜಮ್ಮು–ಕಾಶ್ಮೀರದಲ್ಲಿ ಉಗ್ರರರ ಮೇಲೆ ಭದ್ರತಾ ಪಡೆ ದಾಳಿ

ಜಮ್ಮು–ಕಾಶ್ಮೀರ: ದೇಶದ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, 2–3 ಉಗ್ರರು ಸಿಲುಕಿರುವುದಾಗಿ ವರದಿಯಾಗಿದೆ.

ಜಮ್ಮು ಮತ್ತು ಕಾಶ್ಮೀರದ ಬುಡ್ಗಮ್‌ ಜಿಲ್ಲೆಯ ರೆಡ್ವೊರಾ ವಲಯದಲ್ಲಿ ಉಗ್ರರು ಅಡಗಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆ ಸುತ್ತುವರಿದಿದ್ದು, ಉಗ್ರರರ ನಡುವೆ ಗುಂಡಿನ  ಚಕಮಕಿ ನಡೆಯುತ್ತಿದೆ.

ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಅಮರನಾಥ ಯಾತ್ರಿಕರು ಇದ್ದ ಬಸ್‌ನ ಮೇಲೆ ಸೋಮವಾರ ರಾತ್ರಿ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಗುಜರಾತ್‌ನ ಏಳು ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ.

ಭದ್ರತಾ ಪಡೆಯು ಉಗ್ರರರ ವಿರುದ್ಧದ ಕಾರ್ಯಾಚರಣೆ ಮುಂದುವರಿಸಿದ್ದು, ಮಂಗಳವಾರ ಉಗ್ರರು ಹಾಗೂ ಭದ್ರತಾ ಪಡೆ ನಡುವೆ ಗುಂಡಿನ ಚಕಮಕಿ ನಡೆಯುತ್ತಿರುವುದಾಗಿ ಪಿಟಿಐ ವರದಿ ಮಾಡಿದೆ.

ಪ್ರತಿಕ್ರಿಯಿಸಿ (+)