ಬುಧವಾರ, ಡಿಸೆಂಬರ್ 11, 2019
25 °C

ಬಿಜೆಪಿ ನಾಯಕರು ಷಂಡರೊ, ಗಂಡಸರೊ ಗೊತ್ತಿಲ್ಲ: ಸಿಎಂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಿಜೆಪಿ ನಾಯಕರು ಷಂಡರೊ, ಗಂಡಸರೊ ಗೊತ್ತಿಲ್ಲ: ಸಿಎಂ

ಕಲಬುರ್ಗಿ:‘ಬಿಜೆಪಿ ನಾಯಕರು ಷಂಡರೊ, ಗಂಡಸರೊ ಗೊತ್ತಿಲ್ಲ. ನಾನು ಅಂಥ ಭಾಷೆ ಬಳಸುವುದಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

‘ನಾವೇನು ಷಂಡರಾ ಎಂದು ಬಿಜೆಪಿಯುವರೇ ಪ್ರಶ್ನೆ ಮಾಡಿಕೊಳ್ಳುತ್ತಿದ್ದಾರೆ. ಷಂಡತನದ ಬಗ್ಗೆ ಅವರೇ ಉತ್ತರ ನೀಡಬೇಕು’ ಎಂದು ಸಂಸದೆ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಕೆ.ಎಸ್‌.ಈಶ್ವರಪ್ಪ ಅವರ ಹೇಳಿಕೆಗೆ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.

‘ದಕ್ಷಿಣ ಕನ್ನಡ ಜಿಲ್ಲೆಯ ಕೋಮುಗಲಭೆಯಲ್ಲಿ ತೊಡಗಿದವರು ಹಾಗೂ ಪ್ರಚೋಚದನೆ ನೀಡಿದವರ ಬಗ್ಗೆ ವರದಿ ನೀಡುವಂತೆ ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ವರದಿ ಬಂದ ಬಳಿಕ ಕ್ರಮ ಜರುಗಿಸಲಾಗುವುದು. ಗಲಭೆಯ ತನಿಖೆ ನಡೆಸಲು ರಾಜ್ಯದಲ್ಲಿನ ಪೊಲೀಸರು ಸಮರ್ಥರಿದ್ದಾರೆ. ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್‌ಐಎ) ವಹಿಸಬೇಕು ಎಂಬ ಬೇಡಿಕೆ ಅಸಮಂಜಸ’ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಬಂಟ್ವಾಳ ಗಲಭೆಗೆ ಸಚಿವರಾದ ಬಿ.ರಮಾನಾಥ ರೈ ಹಾಗೂ ಯು.ಟಿ.ಖಾದರ್‌ ಕಾರಣ ಎಂಬುದು ಬಿಜೆಪಿಯವರ ಕಟ್ಟುಕತೆ. ಉರಿವ ಬೆಂಕಿಗೆ ತುಪ್ಪ ಸುರಿಯುವ ಕೆಲಸವನ್ನು ಅವರು ಮಾಡುತ್ತಿದ್ದಾರೆ. ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ಬಿಜೆಪಿ ನಾಯಕರಿಗೆ ಬುದ್ಧಿ ಹೇಳಬೇಕು. ಇಲ್ಲವೇ ಈ ಬಗ್ಗೆ ಪ್ರಧಾನಿ ಮೋದಿ ಅವರೊಂದಿಗೆ ಮಾತನಾಡಲಿ’ ಎಂದು ಒತ್ತಾಯಿಸಿದರು.

ಪ್ರತಿಕ್ರಿಯಿಸಿ (+)