ಶನಿವಾರ, ಡಿಸೆಂಬರ್ 7, 2019
25 °C

ಸವಾಲು ಸ್ವೀಕಾರ: ಬಿಎಸ್‌ವೈ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸವಾಲು ಸ್ವೀಕಾರ: ಬಿಎಸ್‌ವೈ

ಶಿವಮೊಗ್ಗ: ಸಚಿವರಾದ ಯು.ಟಿ. ಖಾದರ್, ರಮಾನಾಥ ರೈ ಅವರು ತಮ್ಮ ವಿರುದ್ಧ ಸ್ಪರ್ಧಿಸುವಂತೆ ಸಂಸತ್‌ ಸದಸ್ಯರಾದ ಶೋಭಾ ಕರಂದ್ಲಾಜೆ ಹಾಗೂ ನಳಿನ್ ಕುಮಾರ್ ಕಟೀಲ್‌ ಅವರಿಗೆ ಹಾಕಿರುವ ಸವಾಲನ್ನು ಪಕ್ಷ ಸ್ವೀಕರಿಸಿದೆ ಎಂದು ಬಿಜೆಪಿ ರಾಜ್ಯ ಘಟಕದ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಪ್ರಧಾನ ಅಂಚೆ ಕಚೇರಿಯಲ್ಲಿ ಪಾಸ್‌ಪೋರ್ಟ್ ಸೇವಾ ಕೇಂದ್ರ ಸ್ಥಾಪನೆಗೆ ಮಂಗಳವಾರ ಸ್ಥಳ ಪರಿಶೀಲನೆ ನಡೆಸಿದ ನಂತರ ಅವರು ಮಾತನಾಡಿದರು. ‘ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅವರ ಸವಾಲಿಗೆ ತಕ್ಕ ಪ್ರತ್ಯುತ್ತರ  ನೀಡುತ್ತೇವೆ. ಆದರೆ, ಸದ್ಯಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ನೆಲೆಸಲು ಅವರಿಬ್ಬರೂ ಶ್ರಮಿಸಲಿ’ ಎಂದು ಹೇಳಿದರು.

ಪ್ರತಿಕ್ರಿಯಿಸಿ (+)