ಶುಕ್ರವಾರ, ಡಿಸೆಂಬರ್ 13, 2019
17 °C

ತಪ್ಪಿತಸ್ಥರನ್ನು ಶಿಕ್ಷಿಸಿ: ಪ್ರಣವ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತಪ್ಪಿತಸ್ಥರನ್ನು ಶಿಕ್ಷಿಸಿ: ಪ್ರಣವ್‌

ನವದೆಹಲಿ: ದಾಳಿಯನ್ನು ತೀವ್ರವಾಗಿ ಖಂಡಿಸಿರುವ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ,  ದುಷ್ಕೃತ್ಯ ಎಸಗಿದವರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ರಾಜ್ಯ ಸರ್ಕಾರ ಮತ್ತು ಇತರೆ ಭದ್ರತಾ ಸಂಸ್ಥೆಗಳಿಗೆ ಸೂಚಿಸಿದ್ದಾರೆ.

‘ಮುಗ್ಧ ಜೀವಗಳನ್ನು ಗುರಿಯಾಗಿಸಿಕೊಂಡು ನಡೆಸಿರುವ ಇಂತಹ ಸಂವೇದನಾರಹಿತ ಕೃತ್ಯಗಳು ಸಮಾಜದ ಪ್ರಜಾಪ್ರಭುತ್ವದ ಮೌಲ್ಯಗಳ ಮೇಲೆ ನಡೆದ ದಾಳಿ. ಇದು ಸಾರ್ವತ್ರಿಕ ಖಂಡನೆಗೆ ಅರ್ಹವಾದುದು. ಬದ್ಧತೆಯಿಂದ ಮತ್ತು ಸಹಭಾಗಿತ್ವದ ಕ್ರಮದಿಂದ ತಪ್ಪಿತಸ್ಥರನ್ನು ಶಿಕ್ಷಿಸಬೇಕು’ ಎಂದು ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲ ಎನ್‌.ಎನ್‌. ವೊಹ್ರಾ ಅವರಿಗೆ ಕಳುಹಿಸಿರುವ ಸಂದೇಶದಲ್ಲಿ ಮುಖರ್ಜಿ ಹೇಳಿದ್ದಾರೆ.

ಪ್ರತಿಕ್ರಿಯಿಸಿ (+)