ಶುಕ್ರವಾರ, ಡಿಸೆಂಬರ್ 13, 2019
17 °C

ಸ್ಕೈವಾಕ್‌ ನಿರ್ಮಾಣಕ್ಕೆ ಒತ್ತಾಯಿಸಿ ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸ್ಕೈವಾಕ್‌ ನಿರ್ಮಾಣಕ್ಕೆ ಒತ್ತಾಯಿಸಿ ಧರಣಿ

ಬೆಂಗಳೂರು: ಪೀಣ್ಯ–ದಾಸರಹಳ್ಳಿಯ ಮೆಟ್ರೊ ನಿಲ್ದಾಣದ ಬಳಿ ಸ್ಕೈವಾಕ್‌ ನಿರ್ಮಿಸುವಂತೆ  ಒತ್ತಾಯಿಸಿ ಜನ್ಮಭೂಮಿ ರಕ್ಷಣಾ ಪಡೆಯ ಕಾರ್ಯಕರ್ತರು ಧರಣಿ ನಡೆಸಿದರು.

‘ಇಲ್ಲಿ ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿರುವುದರಿಂದ ರಸ್ತೆಯನ್ನು ದಾಟಲು ಸಾರ್ವಜನಿಕರಿಗೆ ಸಮಸ್ಯೆ ಆಗುತ್ತಿದೆ. ಈ ಭಾಗದಲ್ಲಿ ಸಾಕಷ್ಟು ಅಪಘಾತಗಳು ಸಂಭವಿಸಿವೆ. ಹೀಗಾಗಿ ಸುರಂಗ ಮಾರ್ಗ ಅಥವಾ ಸ್ಕೈವಾಕ್ ನಿರ್ಮಿಸಬೇಕು’ ಎಂದು ಪಡೆಯ ಅಧ್ಯಕ್ಷ ನಾಗರಾಜ್ ಒತ್ತಾಯಿಸಿದರು. ಮೆಟ್ರೊ ನಿಲ್ದಾಣದ ಅಧಿಕಾರಿಗೆ  ಮನವಿ ಸಲ್ಲಿಸಿದರು.

ಪ್ರತಿಕ್ರಿಯಿಸಿ (+)