ಶನಿವಾರ, ಡಿಸೆಂಬರ್ 14, 2019
21 °C
ಉಗ್ರರ ಅಡಗುದಾಣಗಳ ಮೇಲೆ ದಾಳಿ

ಮೂವರು ಉಗ್ರರ ಹೊಡೆದುರುಳಿಸಿದ ಸೇನಾ ಪಡೆ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಮೂವರು ಉಗ್ರರ ಹೊಡೆದುರುಳಿಸಿದ ಸೇನಾ ಪಡೆ

ಶ್ರೀನಗರ: ಅಮರನಾಥ ಯಾತ್ರಿಕರ ಮೇಲೆ ನಡೆದ ಉಗ್ರರ ದಾಳಿಯ ಬೆನ್ನಲ್ಲೇ ಮಂಗಳವಾರ ರಾತ್ರಿ ಉಗ್ರರ ಅಡಗುದಾಣಗಳ ಮೇಲೆ ದಾಳಿ ನಡೆಸಿರುವ ಭದ್ರತಾ ಪಡೆಯ ಸಿಬ್ಬಂದಿ ಹಿಜ್ಬುಲ್‌ ಮುಜಾಹಿದ್ದೀನ್‌ ಸಂಘಟನೆಯ ಮೂರು ಮಂದಿ ಉಗ್ರರನ್ನು ಹೊಡೆದುರುಳಿಸಿದ್ದಾರೆ.

ರಾಷ್ಟ್ರೀಯ ರೈಫಲ್ಸ್‌, ವಿಶೇಷ ಕಾರ್ಯ ಪಡೆ, ಕೇಂದ್ರೀಯ ಮೀಸಲು ಪೊಲೀಸ್‌ ಪಡೆ ಮತ್ತು ಕಾಶ್ಮೀರ ಪೊಲೀಸರು ಜಂಟಿಯಾಗಿ ಜಮ್ಮು ಮತ್ತು ಕಾಶ್ಮೀರದ ಬಡಗಾಮ್‌ ಜಿಲ್ಲೆಯಲ್ಲಿ ರಾತ್ರಿ ಇಡೀ ಕಾರ್ಯಾಚರಣೆ ನಡೆಸಿದ್ದಾರೆ.

ಗುಪ್ತಚರ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಯ ಸಿಬ್ಬಂದಿ ಉಗ್ರರನ್ನು ಕೊಂದು ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

ಅನಂತ್‌ನಾಗ್‌ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಭಯೋತ್ಪಾದಕರು ಬಸ್‌ ಮೇಲೆ ನಡೆಸಿದ ದಾಳಿಯಲ್ಲಿ ಅಮರನಾಥ ಯಾತ್ರೆಗೆ ತೆರಳಿದ್ದ 7 ಮಂದಿ ಯಾತ್ರಿಕರು ಮೃತಪಟ್ಟಿದ್ದರು. ಈ ದಾಳಿಯಲ್ಲಿ 32 ಮಂದಿ ಗಾಯಗೊಂಡಿದ್ದಾರೆ.

ಪ್ರತಿಕ್ರಿಯಿಸಿ (+)