ಸೋಮವಾರ, ಡಿಸೆಂಬರ್ 16, 2019
23 °C

ಭ್ರಷ್ಟಾಚಾರ ಆರೋಪ ರಾಜಕೀಯ ಪ್ರೇರಿತ: ತೇಜಸ್ವಿ ಯಾದವ್

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಭ್ರಷ್ಟಾಚಾರ ಆರೋಪ ರಾಜಕೀಯ ಪ್ರೇರಿತ: ತೇಜಸ್ವಿ ಯಾದವ್

ಪಟ್ನಾ: ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ವಿರುದ್ಧ ಬುಧವಾರ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಿದ ಬಳಿಕ ಮಾತನಾಡಿದ ಅವರು, ‘ನನ್ನ ವಿರುದ್ಧದ ಆರೋಪ ರಾಜಕೀಯ ಪ್ರೇರಿತ. 2004ರಲ್ಲಿ ಅಕ್ರಮವಾಗಿ ಆಸ್ತಿ ಗಳಿಸಿದ್ದೇನೆ ಎಂದು ನನ್ನ ವಿರುದ್ಧ ಆರೋಪ ಮಾಡಲಾಗುತ್ತಿದೆ. ಆಗಿನ್ನೂ ನನಗೆ 14–15 ವರ್ಷ ವಯಸ್ಸು. ಮೀಸೆಯೂ ಬಂದಿರಲಿಲ್ಲ. ಆ ವಯಸ್ಸಿನಲ್ಲಿ ನಾನು ಅಂಥ ಚಟುವಟಿಕೆಯಲ್ಲಿ ಹೇಗೆ ತೊಡಗಿರಲು ಸಾಧ್ಯ? ಇದೆಲ್ಲ ಪ್ರಧಾನಿ ಮೋದಿ ಹಾಗೂ ಅಮಿತ್‌ ಷಾ ನನ್ನ ವಿರುದ್ಧ ಹೂಡಿರುವ ರಾಜಕೀಯ ಸಂಚು’ ಎಂದು ಆರೋಪಿಸಿದ್ದಾರೆ.

‘ಭ್ರಷ್ಟಾಚಾರವನ್ನು ಸಹಿಸುವುದಿಲ್ಲ ಎಂದು ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲೇ ನಾನು ಸ್ಪಷ್ಟಪಡಿಸಿದ್ದೆ. ನನ್ನ ಅಧೀನದಲ್ಲಿರುವ ಮೂರು ಇಲಾಖೆಗಳಲ್ಲಿ ಯಾವುದಾದರಲ್ಲಾದರೂ ಭ್ರಷ್ಟಾಚಾರ ಆರೋಪ ಕೇಳಿಬಂದಿದೆಯೇ’ ಎಂದು ಅವರು ಪ್ರಶ್ನಿಸಿದ್ದಾರೆ.

ರಾಜೀನಾಮೆ ನೀಡುವುದಿಲ್ಲವೆಂದು ಸುಳಿವು ನೀಡಿದ ತೇಜಸ್ವಿ, ಬಿಜೆಪಿಯ ಸಂಚಿನ ವಿರುದ್ಧ ಜನರ ಬಳಿ ತೆರಳುವುದಾಗಿ ತಿಳಿಸಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿ ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಮತ್ತು ಅವರ ಕುಟುಂಬದವರ ನಿವಾಸಗಳ, ಕಚೇರಿಗಳ ಮೇಲೆ ಸಿಬಿಐ ಅಧಿಕಾರಿಗಳು ಇತ್ತೀಚೆಗೆ ದಾಳಿ ನಡೆಸಿದ್ದರು. ಇದರ ಬೆನ್ನಲ್ಲೇ ಈ ಬಗ್ಗೆ ವಿವರಣೆ ನೀಡುವಂತೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಆಡಳಿತಾರೂಢ ಮಿತ್ರ ಪಕ್ಷ ಆರ್‌ಜೆಡಿಗೆ ಸೂಚಿಸಿದ್ದರು.

ಪ್ರತಿಕ್ರಿಯಿಸಿ (+)