ಬುಧವಾರ, ಡಿಸೆಂಬರ್ 11, 2019
24 °C

ಟೀಂ ಇಂಡಿಯಾ ನಾಯಕಿ ಮಿಥಾಲಿ ರಾಜ್ ವಿಶ್ವ ದಾಖಲೆ

Published:
Updated:
ಟೀಂ ಇಂಡಿಯಾ ನಾಯಕಿ ಮಿಥಾಲಿ ರಾಜ್ ವಿಶ್ವ ದಾಖಲೆ

ಬ್ರಿಸ್ಟಲ್: ಟೀಂ ಇಂಡಿಯಾ ನಾಯಕಿ ಮಿಥಾಲಿ ರಾಜ್ ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ 6000 ರನ್‌ ಗಳಿಸಿದ ಮೊದಲ ಆಟಗಾರ್ತಿ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

ಮಿಥಾಲಿ ರಾಜ್ ಕೇವಲ 183 ಪಂದ್ಯಗಳಲ್ಲಿ 6000 ರನ್‌ ಪೇರಿಸಿದ್ದಾರೆ. ಇದಕ್ಕೂ ಮುನ್ನ ಇಂಗ್ಲೆಂಡ್‌ನ ಚಾರ್ಲೊಟ್ ಎಡ್ವರ್ಡ್ಸ್191 ಪಂದ್ಯಗಳಲ್ಲಿ  5992 ರನ್‌ ಗಳಿಸಿದ್ದರು. ಇದೀಗ ಮಿಥಾಲಿ ರಾಜ್‌ ಈ ದಾಖಲೆಯನ್ನು ಮುರಿದಿದ್ದಾರೆ.

ಸದ್ಯ ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ಐಸಿಸಿ ಮಹಿಳಾ ವಿಶ್ವಕಪ್‌ ಕ್ರಿಕೆಟ್‌ನಲ್ಲಿ  ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಮಿಥಾಲಿ ರಾಜ್ ಅಜೇಯ 66 ರನ್‌ ಗಳಿಸಿದ್ದು, ತಮ್ಮ ಆಟವನ್ನು ಮುಂದುವರಿಸಿದ್ದಾರೆ.

ಪ್ರತಿಕ್ರಿಯಿಸಿ (+)