ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈ ಬಾರಿ ಪರಿಸ್ಥಿತಿ ಭಿನ್ನವಾಗಿದೆ: ಭಾರತಕ್ಕೆ ಚೀನಾ ತಿರುಗೇಟು

Last Updated 12 ಜುಲೈ 2017, 14:59 IST
ಅಕ್ಷರ ಗಾತ್ರ

ಬೀಜಿಂಗ್: ಸಿಕ್ಕಿಂ ಗಡಿ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿರುವ ವಿಷಯಕ್ಕೆ ಸಂಬಂಧಿಸಿ ಭಾರತದ ವಿದೇಶಾಂಗ ಕಾರ್ಯದರ್ಶಿ ಎಸ್‌. ಜೈಶಂಕರ್ ನೀಡಿದ್ದ ಹೇಳಿಕೆಗೆ ತಿರುಗೇಟು ನೀಡಿರುವ ಚೀನಾದ ವಿದೇಶಾಂಗ ಸಚಿವಾಲಯ, ಈ ಬಾರಿ ಪರಿಸ್ಥಿತಿ ಭಿನ್ನವಾಗಿದೆ ಎಂದು ಹೇಳಿದೆ.

ಗಡಿ ವಿವಾದಕ್ಕೆ ಸಂಬಂಧಿಸಿ ಸಿಂಗಾಪುರದಲ್ಲಿ ಕೇಳಲಾಗಿದ್ದ ಪ್ರಶ್ನೆಗೆ ಉತ್ತರಿಸಿದ್ದ ಜೈಶಂಕರ್ ಅವರು, ‘ಚೀನಾದೊಂದಿಗೆ ಗಡಿ ವಿವಾದವಾಗುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಅನೇಕ ಬಾರಿ ಇಂಥ ಪರಿಸ್ಥಿತಿ ನಿಭಾಯಿಸಲಾಗಿದೆ. ಹೀಗಾಗಿ ಈ ಬಾರಿ ನಿಭಾಯಿಸುವುದು ನಮ್ಮಿಂದಾಗದೇ’ ಎಂದು ಮರುಪ್ರಶ್ನಿಸಿದ್ದರು.

ಇದಕ್ಕೆ ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ಜೆಂಗ್‌ ಶಾಂಗ್‌ ಪ್ರತಿಕ್ರಿಯೆ ನೀಡಿ, ‘ಚೀನಾದ ಭೂಪ್ರದೇಶಕ್ಕೆ ಅಕ್ರಮವಾಗಿ ನುಸುಳಿದ್ದನ್ನು ಚೀನಾ ಅನೇಕ ಬಾರಿ ಗಮನಿಸಿದೆ. ಆದರೆ, ಈ ಬಾರಿ ಪರಿಸ್ಥಿತಿ ಸಂಪೂರ್ಣ ಭಿನ್ನವಾಗಿದೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT