ಭಾನುವಾರ, ಡಿಸೆಂಬರ್ 15, 2019
23 °C

ಅಂಬೇಡ್ಕರ್ ಸ್ಕೂಲ್ ಆಫ್‌ ಎಕನಾಮಿಕ್ಸ್‌ಗೆ ಅರ್ಜಿ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಂಬೇಡ್ಕರ್ ಸ್ಕೂಲ್ ಆಫ್‌ ಎಕನಾಮಿಕ್ಸ್‌ಗೆ ಅರ್ಜಿ ಆಹ್ವಾನ

ಬೆಂಗಳೂರು: ಡಾ.ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್‌ ಎಕನಾಮಿಕ್ಸ್‌ಗೆ 2017–18ನೇ ಸಾಲಿನ ಪ್ರವೇಶಕ್ಕಾಗಿ   ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪ್ರಥಮ ವರ್ಷದ ಬಿ.ಎಸ್ಸಿ (ಆನರ್‌್ಸ್) ಎಕನಾಮಿಕ್ಸ್‌ ಕೋರ್ಸ್‌ ಆರಂಭಿಸಲಾಗುತ್ತಿದೆ. 50 ಸೀಟುಗಳು ಇವೆ. ಇದರಲ್ಲಿ 25 ಸೀಟುಗಳನ್ನು ಕರ್ನಾಟಕದ ವಿದ್ಯಾರ್ಥಿಗಳಿಗೆ ಮತ್ತು 25 ಸೀಟುಗಳನ್ನು ದೇಶದ ಇತರೆ ಭಾಗದ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬೆಂಗಳೂರು, ಮೈಸೂರು, ಬೆಳಗಾವಿ, ಕಲಬುರಗಿ ಹಾಗೂ ಪುಣೆ, ಕೋಲ್ಕತ್ತ, ಚೆನ್ನೈ ಹಾಗೂ ದೆಹಲಿಯಲ್ಲಿ ಪ್ರವೇಶ ಪರೀಕ್ಷೆ ನಡೆಸಲಿದೆ.

ವಿವರಗಳಿಗೆ ಪ್ರಾಧಿಕಾರದ ವೆಬ್‌ಸೈಟ್‌ (http://kea.kar.nic.in) ವೀಕ್ಷಿಸಬಹುದು.

**

ವೇಳಾಪಟ್ಟಿ

* 18, ಜುಲೈ: ಅರ್ಜಿ ಸಲ್ಲಿಸಲು ಕೊನೆಯ ದಿನ

* 24, ಜುಲೈ: ಪ್ರವೇಶ ಪತ್ರಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಬೇಕು

* 30, ಜುಲೈ: ಪ್ರವೇಶ ಪರೀಕ್ಷೆ

* 3, ಆಗಸ್ಟ್‌: ಸರಿ ಉತ್ತರ ಪ್ರಕಟ

* 7, ಆಗಸ್ಟ್‌: ಫಲಿತಾಂಶ ಪ್ರಕಟ

* 12, ಆಗಸ್ಟ್‌: ಸೀಟು ಹಂಚಿಕೆ ಕೌನ್ಸೆಲಿಂಗ್

* 23, ಆಗಸ್ಟ್‌: ತರಗತಿ ಪ್ರಾರಂಭ

ಪ್ರತಿಕ್ರಿಯಿಸಿ (+)