ಶುಕ್ರವಾರ, ಡಿಸೆಂಬರ್ 13, 2019
20 °C

ಉತ್ತರ ಪ್ರದೇಶದಲ್ಲಿ ಮಳೆಗೆ 10 ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉತ್ತರ ಪ್ರದೇಶದಲ್ಲಿ ಮಳೆಗೆ 10 ಸಾವು

ಲಖನೌ: ಉತ್ತರ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ವಿವಿಧೆಡೆ ಮನೆಗಳು ಕುಸಿದ ಘಟನೆಯಲ್ಲಿ ಮಕ್ಕಳು, ಮಹಿಳೆ ಸೇರಿದಂತೆ ಒಟ್ಟು ಹತ್ತು ಮಂದಿ ಮೃತಪಟ್ಟಿದ್ದಾರೆ.

ರಾಜ್ಯದಾದ್ಯಂತ ಪ್ರವಾಹ ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಂಡಿದ್ದು, ಪ್ರಮುಖ ನದಿಗಳ ನೀರಿನ ಮಟ್ಟದಲ್ಲಿ ಏರಿಕೆ ಕಂಡುಬಂದಿದೆ.

ಗುವಾಹಟಿ (ಪಿಟಿಐ): ಅಸ್ಸಾಂನಲ್ಲೂ ಬುಧವಾರ ಪ್ರವಾಹ ಸ್ಥಿತಿ ಉಲ್ಬಣಿಸಿದ್ದು, 5 ಮಂದಿ ಸಾವಿಗೀಡಾಗಿದ್ದಾರೆ. ಇದರಿಂದ, ಈ ಬಾರಿಯ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ 44ಕ್ಕೆ ಏರಿದಂತಾಗಿದೆ. ಅತಿವೃಷ್ಟಿಯಿಂದ ರಾಜ್ಯದ 24 ಜಿಲ್ಲೆಗಳ 17.2 ಲಕ್ಷ ಮಂದಿ ತೊಂದರೆಗೆ ಒಳಗಾಗಿದ್ದಾರೆ.

ಪ್ರತಿಕ್ರಿಯಿಸಿ (+)