ಭಾನುವಾರ, ಡಿಸೆಂಬರ್ 15, 2019
21 °C

ಯಡಿಯೂರಪ್ಪ ವಿರುದ್ಧದ ಪ್ರಕರಣ ಹಿಂದೆ ಸರಿದ ನ್ಯಾಯಮೂರ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಡಿಯೂರಪ್ಪ ವಿರುದ್ಧದ ಪ್ರಕರಣ ಹಿಂದೆ ಸರಿದ ನ್ಯಾಯಮೂರ್ತಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ವಿರುದ್ಧದ ಮೂರು ಪ್ರಕರಣಗಳ ವಿಚಾರಣೆಯಿಂದ ನ್ಯಾಯಮೂರ್ತಿ ರತ್ನಕಲಾ ಹಿಂದೆ ಸರಿದಿದ್ದಾರೆ.

‘ಈ ಹಿಂದೆ ಯಡಿಯೂರಪ್ಪ  ಅರ್ಜಿದಾರರಾಗಿದ್ದ ಪ್ರಕರಣವನ್ನು ನಾನೇ ವಿಚಾರಣೆ ನಡೆಸಿದ್ದೆ. ಈಗ  ಈ ಪ್ರಕರಣದಲ್ಲಿ ಯಡಿಯೂರಪ್ಪ ಪ್ರತಿವಾದಿಯಾಗಿದ್ದಾರೆ. ಹಾಗಾಗಿ ನಾನು ಈ ಪ್ರಕರಣದ ವಿಚಾರಣೆ ನಡೆಸುವುದಿಲ್ಲ’ ಎಂದು ರತ್ನಕಲಾ ವಿಚಾರಣೆಯಿಂದ ಹಿಂದೆ ಸರಿಯುತ್ತಿರುವುದಕ್ಕೆ ಮೌಖಿಕ ವಿವರಣೆ ನೀಡಿದರು.

ಯಡಿಯೂರಪ್ಪ ವಿರುದ್ಧ ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಶಿವಮೊಗ್ಗದ ವಕೀಲ ಬಿ.ವಿನೋದ್‌ 2012, 2013 ಹಾಗೂ 2014ರಲ್ಲಿ ಲೋಕಾಯುಕ್ತ ನ್ಯಾಯಾಲಯಕ್ಕೆ ಪ್ರತ್ಯೇಕ ಮೂರು ದೂರು ಸಲ್ಲಿಸಿದ್ದರು.

‘ಮೇಲ್ನೋಟಕ್ಕೆ ಈ ಪ್ರಕರಣಗಳಲ್ಲಿ ಹುರುಳಿಲ್ಲ’ ಎಂದು ವಿಶೇಷ ನ್ಯಾಯಾಲಯ ದೂರು ವಜಾ ಮಾಡಿತ್ತು.ಈ ಆದೇಶವನ್ನು ವಿನೋದ್‌ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಪ್ರತಿಕ್ರಿಯಿಸಿ (+)