ಮಂಗಳವಾರ, ಡಿಸೆಂಬರ್ 10, 2019
16 °C

ಪರಪ್ಪನ ಅಗ್ರಹಾರದ ಕಾರಾಗೃಹದಲ್ಲಿ ಅವ್ಯವಹಾರ: ತನಿಖೆಗೆ ಸಿಎಂ ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪರಪ್ಪನ ಅಗ್ರಹಾರದ  ಕಾರಾಗೃಹದಲ್ಲಿ ಅವ್ಯವಹಾರ: ತನಿಖೆಗೆ ಸಿಎಂ ಆದೇಶ

ಬೆಂಗಳೂರು : ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ ಎನ್ನಲಾಗಿರುವ ಅವ್ಯವಹಾರಗಳ ಬಗ್ಗೆ ಉನ್ನತ ಮಟ್ಟದ ವಿಚಾರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ನೀಡಿದ್ದಾರೆ.

ಕಾರಾಗೃಹದಲ್ಲಿ ಬಂಧಿಯಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ. ಶಶಿಕಲಾಗೆ ವಿಶೇಷ ಆತಿಥ್ಯ ನೀಡಲು ಕಾರಾಗೃಹಗಳ ಇಲಾಖೆಯ ಅಧಿಕಾರಿಗಳು ಲಂಚ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಈ ಆದೇಶ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಮುಖ್ಯಮಂತ್ರಿಯವರು ಉನ್ನತ ಮಟ್ಟದ ತನಿಖೆ ನಡೆಸುವ ತೀರ್ಮಾನ ಕೈಗೊಂಡಿದ್ದಾರೆ.

ಕಾರಾಗೃಹದಲ್ಲಿ ನಡೆದಿದೆ ಎನ್ನಲಾಗಿರುವ ಅವ್ಯವಹಾರಗಳ ಬಗ್ಗೆ ಉನ್ನತ ಮಟ್ಟದಲ್ಲಿ ಸಮಗ್ರ ವಿಚಾರಣೆ ನಡೆಸಿ ಶೀಘ್ರದಲ್ಲೇ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿಯವರು ಆದೇಶಿಸಿದ್ದಾರೆ.

ಜಗದೀಶ್ ಶೆಟ್ಟರ್ ಹೇಳಿಕೆ

ಜೈಲಿನಲ್ಲೂ ಭ್ರಷ್ಟಾಚಾರ ನಡೆದಿದೆ. ಲಂಚಕ್ಕಾಗಿ ಅಲ್ಲಿ ಡ್ರಗ್ಸ್, ಗಾಂಜಾಗೆ ಅವಕಾಶ ನೀಡಲಾಗಿದೆ ಎಂದು ಡಿಐಜಿ ಡಿ.ರೂಪಾ ಅವರು  ವರದಿ ಸಲ್ಲಿಸಿದ್ದಾರೆ. ಅಧಿಕಾರಿಗಳ ನಡುವೆಯೇ ಸಮನ್ವಯ ಇಲ್ಲ.

ಐಪಿಎಸ್ ಅಧಿಕಾರಿಗಳೇ ಕಚ್ಚಾಟದಲ್ಲಿ ತೊಡಗಿದ್ದು, ಪರಪ್ಪನ ಅಗ್ರಹಾರದಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ ಎಂಬುದು ಗೊತ್ತಾಗಿದೆ.   ರೂಪಾ ಅವರ ವರದಿ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯಬೇಕು ಎಂದು ಜಗದೀಶ್ ಶೆಟ್ಟರ್ ಆಗ್ರಹಿಸಿದ್ದಾರೆ.

ಪ್ರತಿಕ್ರಿಯಿಸಿ (+)