ಸೋಮವಾರ, ಡಿಸೆಂಬರ್ 16, 2019
18 °C

ಗೋಮಾಂಸ ಸಾಗಣೆ ಆರೋಪ: ಮುಸ್ಲಿಂ ವ್ಯಕ್ತಿ ಮೇಲೆ ಹಲ್ಲೆ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಗೋಮಾಂಸ ಸಾಗಣೆ ಆರೋಪ: ಮುಸ್ಲಿಂ ವ್ಯಕ್ತಿ ಮೇಲೆ ಹಲ್ಲೆ

ನಾಗಪುರ: ಜುನೈದ್‌ ಪ್ರಕರಣ ಮಾಸುವ ಮುನ್ನವೇ ಗೋಮಾಂಸ ಸಾಗಣೆ ಮಾಡುತ್ತಿದ್ದಾರೆಂದು ಆರೋಪಿಸಿ ಮುಸ್ಲಿಂ ವ್ಯಕ್ತಿಯೊಬ್ಬರ ಮೂರ್ನಾಲ್ಕು ಮಂದಿ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.

ಮಹಾರಾಷ್ಟ್ರದ ನಾಗಪುರ ಸಮೀಪದ ಭಾರ್ಸಿಂಗಿ ಎಂಬಲ್ಲಿ ಸಲೀಮ್‌ ಶಾ ಎಂಬುವರ ಮೇಲೆ ಬುಧವಾರ ಹಲ್ಲೆ ನಡೆದಿದೆ. ಈ ಹಲ್ಲೆಯ ವಿಡಿಯೊ ಈಗ ವೈರಲ್‌ ಆಗಿದೆ. ಸಲೀಮ್‌ ಅವರನ್ನು ಕೆಳಗೆ ತಳ್ಳಿ ಮೂರ್ನಾಲ್ಕು ಮಂದಿ ಕಾಲಿನಿಂದ ಒದ್ದಿರುವ ದೃಶ್ಯಗಳು ವಿಡಿಯೊದಲ್ಲಿ ಸೆರೆಯಾಗಿವೆ.

‘ನಾನು ಮಾಂಸ ತೆಗೆದುಕೊಂಡು ಹೋಗುತ್ತಿದ್ದೆ. ಆದರೆ, ಅದು ಗೋಮಾಂಸ ಆಗಿರಲಿಲ್ಲ. ಈ ವಿಷಯವನ್ನು ಆ ಗುಂಪಿನಲ್ಲಿದ್ದವರಿಗೆ ಎಷ್ಟು ಹೇಳಿದರೂ ಅವರು ಅದನ್ನು ಕೇಳಿಸಿಕೊಳ್ಳದೆ ನನ್ನ ಮೇಲೆ ಹಲ್ಲೆ ನಡೆಸಿದರು’ ಎಂದು ಸಲೀಮ್‌ ತಿಳಿಸಿದ್ದಾರೆ.

ಹಲ್ಲೆಗೊಳಗಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸಲೀಮ್‌ ಅವರನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ.

‘ಸಲೀಮ್‌ ತೆಗೆದುಕೊಂಡು ಹೋಗುತ್ತಿದ್ದ ಮಾಂಸವನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಲಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ.

ಘಟನೆ ಸಂಬಂಧ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರತಿಕ್ರಿಯಿಸಿ (+)