ಶನಿವಾರ, ಡಿಸೆಂಬರ್ 7, 2019
24 °C

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಂತಿ ಸಭೆ ಆರಂಭ: ಬಿಜೆಪಿ ಬಹಿಷ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಂತಿ ಸಭೆ ಆರಂಭ: ಬಿಜೆಪಿ ಬಹಿಷ್ಕಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ನಡೆಯುತ್ತಿರುವ ಕೋಮು ದ್ವೇಷದ ಅಹಿತಕರ ಘಟನೆಗಳ ನಿಯಂತ್ರಣ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಂತಿ ಸಭೆ ನಡೆಯುತ್ತಿದೆ.

ಬಿಜೆಪಿ ಸಭೆಯನ್ನು ಬಹಿಷ್ಕರಿಸಿದೆ. ಕಾಂಗ್ರೆಸ್, ಜೆಡಿಎಸ್, ಸಿಪಿಎಂ, ಸಿಪಿಐ, ಎಸ್ ಡಿಪಿಐ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದಾರೆ. ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್,  ಪಶ್ಚಿಮ ವಲಯ ಐಜಿಪಿ ಪಿ.ಹರಿಶೇಖರನ್, ಮಂಗಳೂರು ಪೊಲೀಸ್ ಕಮಿಷನರ್ ಟಿ.ಆರ್.ಸುರೇಶ್, ದಕ್ಷಿಣ ಕನ್ನಡ ಎಸ್ ಪಿ ಸಿ.ಎಚ್. ಸುಧೀರ್ ಕುಮಾರ್ ರೆಡ್ಡಿ ಸೇರಿದಂತೆ ಹಲವು‌ ಅಧಿಕಾರಿಗಳ ಉಪಸ್ಥಿತರಿದ್ದಾರೆ.

ಪ್ರತಿಕ್ರಿಯಿಸಿ (+)