ಶುಕ್ರವಾರ, ಡಿಸೆಂಬರ್ 13, 2019
20 °C
ಕಲ್ಲಡ್ಕ ಪ್ರಭಾಕರ್ ಭಟ್‌ರನ್ನು ಮುಟ್ಟಿ ನೋಡಿ: ರಾಜ್ಯ ಸರ್ಕಾರಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಎಚ್ಚರಿಕೆ

ಕಾಂಗ್ರೆಸ್ ಶವಪೆಟ್ಟಿಗೆಗೆ ಕೊನೆಯ ಮೊಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾಂಗ್ರೆಸ್ ಶವಪೆಟ್ಟಿಗೆಗೆ ಕೊನೆಯ ಮೊಳೆ

ಮಂಗಳೂರು:  ‘ನಿಜವಾದ ಆರೋಪಿಗಳನ್ನು ಬಂಧಿಸಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ನೆಲೆಸುವಂತೆ ಮಾಡಬೇಕಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಾ. ಪ್ರಭಾಕರ್‌ ಭಟ್‌ ಕಲ್ಲಡ್ಕ, ನನ್ನನ್ನು ಬಂಧಿಸುವಂತೆ ಸೂಚನೆ ನೀಡುತ್ತಿದ್ದಾರೆ. ಒಂದು ವೇಳೆ ಪ್ರಭಾಕರ್ ಭಟ್ ಹಾಗೂ ನನ್ನನ್ನು ಮುಟ್ಟಿದ್ದೇ ಆದಲ್ಲಿ, ಅದು ಕಾಂಗ್ರೆಸ್‌ ಶವ ಪೆಟ್ಟಿಗೆಯ ಮೇಲಿನ ಕೊನೆಯ ಮೊಳೆ ಆಗಲಿದೆ’ ಎಂದು ಸಂಸದೆ ಶೋಭಾ ಕರಂದ್ಲಾಜೆ ಎಚ್ಚರಿಸಿದರು.

ನಗರದ ಪುರಭವನದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಕೆಲಸ ಮಾಡಲಾಗದೇ ಸ್ವಯಂ ನಿವೃತ್ತಿ ಪಡೆದ ಕೆಂಪಯ್ಯ ಅವರನ್ನು ಕೂಡ್ರಿಸಿಕೊಂಡು ಮುಖ್ಯಮಂತ್ರಿಗಳು, ಪೊಲೀಸ್‌ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಇದರಿಂದ ಪೊಲೀಸ್‌ ಅಧಿಕಾರಿಗಳಿಗೆ ಅವಮಾನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಕ್ರಿಯಿಸಿ (+)