ಭಾನುವಾರ, ಡಿಸೆಂಬರ್ 15, 2019
17 °C

ಚೀನಾ ತಂಟೆ: ವಿರೋಧ ಪಕ್ಷಗಳಿಗೆ ಇಂದು ಸರ್ಕಾರದ ವಿವರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚೀನಾ ತಂಟೆ: ವಿರೋಧ ಪಕ್ಷಗಳಿಗೆ ಇಂದು ಸರ್ಕಾರದ ವಿವರಣೆ

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಸಮೀಪಿಸುತ್ತಿರುವುದರಿಂದ ವಿರೋಧ ಪಕ್ಷಗಳ ವಿಶ್ವಾಸ ಗಳಿಸಲು  ಸರ್ಕಾರ ಮುಂದಾಗಿದೆ.

ಹಾಗಾಗಿ ಸಿಕ್ಕಿಂನ ದೋಕ ಲಾದಲ್ಲಿ ಚೀನಾ ಸೈನಿಕರ ಗಡಿತಂಟೆ ಮತ್ತು ಕಾಶ್ಮೀರದ ಭದ್ರತಾ ಸ್ಥಿತಿಯ ಬಗ್ಗೆ ವಿರೋಧ ಪಕ್ಷಗಳಿಗೆ ಗೃಹ ಸಚಿವ ರಾಜನಾಥ್ ಸಿಂಗ್ ಮತ್ತು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಶುಕ್ರವಾರ ವಿವರಣೆ ನೀಡಲಿದ್ದಾರೆ.

ಸೋಮವಾರದಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಈ ವಿಷಯಗಳನ್ನು ಪ್ರಸ್ತಾಪಿಸಿ ವಿರೋಧ ಪಕ್ಷಗಳು ಗದ್ದಲ ಎಬ್ಬಿಸುವ ಸಾಧ್ಯತೆ ಇರುವುದರಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ.

ಭದ್ರತಾ ವೈಫಲ್ಯ ಕುರಿತಂತೆ ವಿರೋಧ ಪಕ್ಷಗಳು ಸರ್ಕಾರವನ್ನು ಹಣಿಯುವ ಸಾಧ್ಯತೆ ಇರುವುದರಿಂದ ಪ್ರಮುಖ ಸಮಸ್ಯೆಗಳ ಬಗ್ಗೆ ವಿರೋಧ ಪಕ್ಷಗಳಿಗೆ ಸಂಪೂರ್ಣ ಮಾಹಿತಿ ನೀಡಿ ಸಲಹೆ, ಸೂಚನೆ ಪಡೆಯುವುದು ಸರ್ಕಾರದ ಉದ್ದೇಶವಾಗಿದೆ.

ಪ್ರತಿಕ್ರಿಯಿಸಿ (+)