ಶನಿವಾರ, ಡಿಸೆಂಬರ್ 7, 2019
24 °C

ಆರ್‌ಟಿಐ ಕಾರ್ಯಕರ್ತರಿಗೆ ರಕ್ಷಣೆ ನಿಯಮ ರೂಪಿಸಲು ನಿರ್ದೇಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆರ್‌ಟಿಐ ಕಾರ್ಯಕರ್ತರಿಗೆ ರಕ್ಷಣೆ ನಿಯಮ ರೂಪಿಸಲು ನಿರ್ದೇಶನ

ಬೆಂಗಳೂರು: ‘ಮಾಹಿತಿ ಹಕ್ಕು ಕಾರ್ಯಕರ್ತರ (ಆರ್‌ಟಿಐ) ರಕ್ಷಣೆಗೆ ಸಂಬಂಧಿಸಿದಂತೆ ಸೂಕ್ತ ನಿಯಮಗಳನ್ನು ರಚಿಸಲು ಮೂರು ತಿಂಗಳ ಕಾಲಾವಕಾಶ ಬೇಕು’ ಎಂದು ಸರ್ಕಾರ ಹೈಕೋರ್ಟ್‌ಗೆ ಮನವಿ ಮಾಡಿದೆ.

ರಾಜ್ಯ ಗೃಹ ಇಲಾಖೆಯ ಉಪ ಕಾರ್ಯದರ್ಶಿ ಪಿ.ಕೆ.ಗರ್ಗ್‌ ವಿರುದ್ಧ ಆರ್‌ಟಿಐ ಕಾರ್ಯಕರ್ತ ಎಸ್‌.ಉಮಾಪತಿ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಮೊಕದ್ದಮೆಯನ್ನು ನ್ಯಾಯಮೂರ್ತಿ ಜಯಂತ್ ಪಟೇಲ್ ನೇತೃತ್ವದ ಪೀಠ ಗುರುವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸರ್ಕಾರಿ ವಕೀಲ ಡಿ.ನಾಗರಾಜ ಅವರು ಪ್ರಮಾಣ ಪತ್ರ ಸಲ್ಲಿಸಿದರು.

‘ಗೃಹ ಇಲಾಖೆ ಈ ಸಂಬಂಧ ಬುಧವಾರವಷ್ಟೇ (ಜು.12) ಸಭೆ ನಡೆಸಿದೆ. ವಿವಿಧ ಇಲಾಖೆಗಳ ಜೊತೆ ಇನ್ನಷ್ಟು ಚರ್ಚೆ ನಡೆಸಬೇಕಿದೆ. ಅದಕ್ಕಾಗಿ ಮೂರು ತಿಂಗಳ ಕಾಲಾವಕಾಶ ಬೇಕು’ ಎಂದು ಕೋರಿದರು. ಇದಕ್ಕೆ ಒಪ್ಪದ ನ್ಯಾಯಪೀಠ, ‘ಆದಷ್ಟು ಶೀಘ್ರ ನೀತಿ, ನಿಯಮಾವಳಿ ರೂಪಿಸಲು ಕ್ರಮ ಕೈಗೊಳ್ಳಬೇಕು. ಈ ಕುರಿತ ವರದಿಯನ್ನು ನಾಲ್ಕು ವಾರಗಳಲ್ಲಿ ಕೋರ್ಟ್‌ಗೆ ಸಲ್ಲಿಸಬೇಕು’ ಎಂದು ತಾಕೀತು ಮಾಡಿ ವಿಚಾರಣೆ ಮುಂದೂಡಿದೆ.

ಪ್ರತಿಕ್ರಿಯಿಸಿ (+)