ಶುಕ್ರವಾರ, ಡಿಸೆಂಬರ್ 6, 2019
17 °C

‘ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‘ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ’

ಜೇವರ್ಗಿ: ತಾಲ್ಲೂಕಿನ ಪ್ರತಿಯೊಂದು ಗ್ರಾಮಕ್ಕೆ ಮೂಲಸೌಕರ್ಯ ಕಲ್ಪಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಆ ನಿಟ್ಟಿನಲ್ಲಿ ವಸ್ತಾರಿ ಗ್ರಾಮದ ಅಭಿವೃದ್ಧಿಗೆ 2016–17ನೇ ಸಾಲಿನ ಗ್ರಾಮ ವಿಕಾಸ ಯೋಜನೆಯಡಿ ₹ 70ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ’ ಎಂದು ಶಾಸಕ ಡಾ.ಅಜಯಸಿಂಗ್ ಹೇಳಿದರು.

ತಾಲ್ಲೂಕಿನ ಅರಳಗುಂಡಗಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ವಸ್ತಾರಿ ಗ್ರಾಮದಲ್ಲಿ ರಾಜ್ಯ ಸರ್ಕಾರದ ಗ್ರಾಮ ವಿಕಾಸ ಯೋಜನೆಯಡಿ ಕೈಗೊಂಡ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬುಧವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. 

‘ತಾಲ್ಲೂಕಿನ 5 ಗ್ರಾಮಗಳನ್ನು ಗ್ರಾಮ ವಿಕಾಸ ಯೋಜನೆಯಡಿ ಆಯ್ಕೆ ಮಾಡಲಾಗಿದೆ. ಗ್ರಾಮ ವಿಕಾಸ ಯೋಜನೆಯಡಿ ಗ್ರಾಮಗಳಲ್ಲಿ ಸಿಸಿ ರಸ್ತೆ, ಚರಂಡಿ ನಿರ್ಮಿಸಲಾಗುವುದು. ಸಮರ್ಪಕವಾಗಿ ಕುಡಿಯುವ ನೀರು ಪೂರೈಸಲಾಗುವುದು. ತಾಲ್ಲೂಕಿನ 220ಕಿ.ಮೀ. ಜಿಲ್ಲಾ ಮುಖ್ಯ ರಸ್ತೆಗಳನ್ನು ರಾಜ್ಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗ ೇರಿಸಲಾಗಿದೆ’ ಎಂದು ತಿಳಿಸಿದರು.

‘ಹಂತಹಂತವಾಗಿ  ಪ್ರತಿ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು. ನಿಗದಿತ ಅವಧಿಯಲ್ಲಿ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಬೇಕು’ ಎಂದು ಅವರು ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.  

ಅಯ್ಯಣ್ಣ ಮುತ್ತ್ಯಾ ವಸ್ತಾರಿ, ಅರಳಗುಂಡಗಿ ಜಿಲ್ಲಾ ಪಂಚಾಯಿತಿ ಸದಸ್ಯ ರೇವಣಸಿದ್ದಪ್ಪ ಸಂಕಾಲಿ, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಗೊಲ್ಲಾಳಪ್ಪ ಪೂಜಾರಿ ಕರಕಿಹಳ್ಳಿ, ಮುಖಂಡರಾದ ಬಸಲಿಂಗಪ್ಪಗೌಡ ಬಿರಾದಾರ್ ವಸ್ತಾರಿ,   ಗೊಲ್ಲಾಳಪ್ಪಗೌಡ ಮಾಗಣಗೇರಾ, ಹಣಮಂತರಾಯಗೌಡ ವರವಿ,  ಕಾಶಿರಾಯಗೌಡ ಯಲಗೋಡ, ಮಲ್ಲಿಕಾರ್ಜುನ ಉಮ್ಮರಗಿ, ಸಂಗಣ್ಣ ಇಟಗಾ, ವಸಂತ ನರಿಬೋಳ, ವಿರುಪಾಕ್ಷಯ್ಯ ನಂದಿಕೋಲಮಠ, ಈರಣ್ಣಗೌಡ ಕಲ್ಲೂರ್ (ಕೆ), ಮರೆಪ್ಪ ಸರಡಗಿ, ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮದ ಸಹಾಯಕ ಎಂಜಿನಿಯರ್ ಸತೀಶ, ವಸ್ತಾರಿ, ಕುಮ್ಮನಶಿರಸಗಿ, ಹಿಪ್ಪರಗಾ  (ಎಸ್.ಎನ್), ವರವಿ ಹಾಗೂ ಕರಕಿಹಳ್ಳಿ ಗ್ರಾಮಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕುಡಿಯುವ ನೀರಿನ ಯೋಜನೆಗೆ ₹ 30 ಲಕ್ಷ

ಜೇವರ್ಗಿ: ‘ತಾಲ್ಲೂಕಿನಲ್ಲಿ ಕುಡಿ ಯುವ ನೀರಿನ ಸಮಸ್ಯೆ ನಿವಾರಿಸಲು ಮತ್ತು ಬೆಣ್ಣೂರ್ ಗ್ರಾಮಕ್ಕೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಲು 2016–17ನೇ ಸಾಲಿನ ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಯೋಜನೆಯಡಿ (ಎನ್ಆರ್ ಇಡಬ್ಲೂಪಿ)₹ 30 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ’ ಎಂದು ಶಾಸಕ ಡಾ.ಅಜಯಸಿಂಗ್ ಹೇಳಿದರು.

ಬುಧವಾರ ತಾಲ್ಲೂಕಿನ ಅರಳಗುಂಡಗಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಬೆಣ್ಣೂರ್ ಗ್ರಾಮದಲ್ಲಿ ಕುಡಿಯುವ ನೀರು ಸರಬುರಾಜು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ‘₹ 30 ಲಕ್ಷ ಅನುದಾನದಲ್ಲಿ ನೀರು ಸಂಗ್ರಹಿಸುವ ಟ್ಯಾಂಕ್, ನೀರು ಮೇಲೆತ್ತುವ ಯಂತ್ರ, ಕೊಳವೆ ಬಾವಿ ಕೊರೆಸುವುದು ಹಾಗೂ ಪೈಪ್ ಲೈನ್ ಅಳವಡಿಸಲಾಗುವುದು’ ಎಂದರು.

ಅರಳಗುಂಡಗಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಸದಸ್ಯ ರೇವಣಸಿದ್ದಪ್ಪ ಸಂಕಾಲಿ, ಮುಖಂಡರಾದ ಗೊಲ್ಲಾಳಪ್ಪಗೌಡ ಮಾಗಣಗೇರಾ, ಭಗವಂತರಾಯ ಬೆಣ್ಣೂರ್, ವಸಂತ ನರಿಬೋಳ, ಕಾಶಿರಾಯಗೌಡ ಯಲಗೋಡ, ಮಲ್ಲಿಕಾರ್ಜುನ ಉಮ್ಮರಗಿ, ಗೊಲ್ಲಾಳಪ್ಪಗೌಡ ಬಿಳೆಬಾವಿ, ಹಣಮಂತರಾಯಗೌಡ ಮಾಲಿ ಪಾಟೀಲ, ಗೊಲ್ಲಾಳಪ್ಪ ರೇವನೂರ್, ಈರಣ್ಣ ರೇವನೂರ್, ಭಗವಂತ ರಾಯಗೌಡ ಮೇಲಂಟ, ಮುದಕಣ್ಣ ನಾಯಿಕೋಡಿ, ಮರೆಪ್ಪ ಸರಡಗಿ, ಗ್ರಾಮೀಣ ಕುಡಿಯುವ ನೀರು ಸರಬ ರಾಜು ಇಲಾಖೆ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ ಚಂದು ಲಾಲ್ ರಾಠೋಡ್, ಕಿರಿಯ ಎಂಜಿನಿ ಯರ್ ಮರೆಪ್ಪ ವರ್ಚನಳ್ಳಿ ಇದ್ದರು.

* * 

ರಾಜ್ಯ ಸರ್ಕಾರದ ಜನಪರ ಯೋಜನೆಗಳನ್ನು  ಜನರಿಗೆ ತಲುಪಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ. ಆ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು.

ಡಾ. ಅಜಯ ಸಿಂಗ್‌

ಶಾಸಕ

ಪ್ರತಿಕ್ರಿಯಿಸಿ (+)