ಶನಿವಾರ, ಡಿಸೆಂಬರ್ 7, 2019
24 °C

ಈಶಾನ್ಯ ಭಾರತದಲ್ಲಿ ಪ್ರವಾಹ: 80 ಜನ ಸಾವು

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಈಶಾನ್ಯ ಭಾರತದಲ್ಲಿ ಪ್ರವಾಹ: 80 ಜನ ಸಾವು

ಗೌಹಾತಿ:  ಈಶಾನ್ಯ ಭಾರತದಲ್ಲಿ ಕಳೆದ ಎರಡು ಮೂರು ದಿನಗಳಿಂದ ಸುರಿಯುತ್ತಿರುವ  ಧಾರಾಕಾರ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು, ಕನಿಷ್ಠ 80 ಮಂದಿ ಸಾವನ್ನಪ್ಪಿದ್ದು, 58 ಜಿಲ್ಲೆಗಳಿಗೆ ಹಾನಿಯುಂಟಾಗಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ.

ಅಸ್ಸಾಂ, ಅರುಣಾಚಲ ಪ್ರದೇಶ ಮತ್ತು ಮಣಿಪುರ ರಾಜ್ಯಗಳಲ್ಲಿ ಪ್ರವಾಹ ಉಂಟಾಗಿದೆ. ಇಲ್ಲಿನ 58 ಜಿಲ್ಲೆಗಳಲ್ಲಿ ಜನ ಜೀವನ ಆಸ್ತವ್ಯಸ್ತವಾಗಿದೆ ಎಂದು ಈಶಾನ್ಯ ಪ್ರದೇಶದ ಅಭಿವೃದ್ಧಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ.

ಸಚಿವರು ಅಲ್ಲಿನ ಅಧಿಕಾರಿಗಳೊಂದಿಗೆ  ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಿದರು. ಅಪಾಯದ ಪ್ರದೇಶಗಳಲ್ಲಿರುವ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಿದ್ದು ಆಹಾರ, ನೀರು ಮತ್ತು ಬಟ್ಟೆ ಒದಗಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. ರಾಜ್ಯ ಸರ್ಕಾರಗಳಿಗೆ ಎಲ್ಲಾ ರೀತಿಯ ನೆರವು ನೀಡಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಜಿತೇಂದ್ರ ಸಿಂಗ್ ತಿಳಿಸಿದರು.

ಪ್ರತಿಕ್ರಿಯಿಸಿ (+)