ಮಂಗಳವಾರ, ಡಿಸೆಂಬರ್ 10, 2019
18 °C

ಮಣಿಪುರದಲ್ಲಿ ನಡೆದಿರುವ ನಕಲಿ ಎನ್‌ಕೌಂಟರ್‌ಗಳ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಿದ ಸುಪ್ರೀಂಕೋರ್ಟ್‌

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಮಣಿಪುರದಲ್ಲಿ ನಡೆದಿರುವ ನಕಲಿ ಎನ್‌ಕೌಂಟರ್‌ಗಳ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಿದ ಸುಪ್ರೀಂಕೋರ್ಟ್‌

ನವದೆಹಲಿ: ಮಣಿಪುರದಲ್ಲಿ ಭದ್ರತಾ ಪಡೆಗಳಿಂದ ನಡೆದ ಹತ್ಯೆಗಳ ಪೈಕಿ ನಕಲಿ ಎನ್ನಲಾದ ಎನ್‌ಕೌಂಟರ್‌ಗಳ ಬಗ್ಗೆ ತನಿಖೆ ನಡೆಸುವಂತೆ ಸುಪ್ರೀಂಕೋರ್ಟ್‌ ಸಿಬಿಐಗೆ ಶುಕ್ರವಾರ ಆದೇಶಿಸಿದೆ.

ಈ ತನಿಖೆಗಾಗಿ ವಿಶೇಷ ತಂಡವನ್ನು ನೇಮಿಸುವಂತೆ ಸಿಬಿಐಗೆ ನಿರ್ದೇಶನ ನೀಡಿರುವ ಸುಪ್ರೀಂಕೋರ್ಟ್‌, ಈ ಬಗ್ಗೆ ಎರಡು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಸಿಬಿಐ ನಿರ್ದೇಶಕರಿಗೆ ಸೂಚಿಸಿದೆ.

‘2000ರಿಂದ 2012ರ ಅವಧಿಯಲ್ಲಿ ಮಣಿಪುರದಲ್ಲಿ 1,528 ನಕಲಿ ಎನ್‌ಕೌಂಟರ್‌ಗಳು ನಡೆದಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಯಬೇಕು’ ಎಂದು ಮಾನವ ಹಕ್ಕು ಹೋರಾಟಗಾರರು ಸುಪ್ರೀಂಕೋರ್ಟ್‌ಗೆ ಮನವಿ ಅರ್ಜಿ ಸಲ್ಲಿಸಿದ್ದರು.ಈ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್‌, ಸೇನಾ ಪಡೆಗಳು ನಿಯಮ ಮೀರಿ ವರ್ತಿಸಿರುವ ಎಲ್ಲಾ ಘಟನೆಗಳ ಬಗ್ಗೆ ತನಿಖೆ ನಡೆಯಬೇಕೆಂದು ಕಳೆದ ವರ್ಷದ ಜುಲೈ ತಿಂಗಳಲ್ಲಿ ತಿಳಿಸಿತ್ತು. ಆದರೆ, ಸೇನೆಯು ಈ ವಿಚಾರದಲ್ಲಿ ಆಂತರಿಕ ತನಿಖೆಯಾಗಬೇಕೆಂದು ಬಯಸಿತ್ತು.

‘ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆ – 1958 (ಎಎಫ್ಎಸ್‌ಪಿಎ) ಜಾರಿಯಲ್ಲಿರುವ ಪ್ರದೇಶಗಳಲ್ಲಿ ಕೂಡಾ ಸೇನೆ ಮತ್ತು ಅರೆಸೇನಾ ಪಡೆಗಳು ಮಿತಿಮೀರಿದ ವರ್ತನೆ ತೋರುವಂತಿಲ್ಲ ಹಾಗೂ ನಿಯಮ ಉಲ್ಲಂಘಿಸಿ ಪ್ರತೀಕಾರದಂಥ ಕ್ರಮಕ್ಕೆ ಮುಂದಾಗುವಂತಿಲ್ಲ’ ಎಂದು ನ್ಯಾಯಪೀಠ ಆದೇಶಿಸಿತ್ತು.

ಪ್ರತಿಕ್ರಿಯಿಸಿ (+)