ಶನಿವಾರ, ಡಿಸೆಂಬರ್ 14, 2019
21 °C

ಕಾರಾಗೃಹದಲ್ಲಿ ಭ್ರಷ್ಟಾಚಾರ ತನಿಖೆಗೆ ವಿನಯಕುಮಾರ್ ನೇತೃತ್ವದಲ್ಲಿ ಸಮಿತಿ ರಚನೆ: ಸಿಎಂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರಾಗೃಹದಲ್ಲಿ ಭ್ರಷ್ಟಾಚಾರ ತನಿಖೆಗೆ ವಿನಯಕುಮಾರ್ ನೇತೃತ್ವದಲ್ಲಿ ಸಮಿತಿ ರಚನೆ: ಸಿಎಂ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ ಎನ್ನಲಾದ ₹ 2 ಕೋಟಿ ಮೊತ್ತದ ಭ್ರಷ್ಟಾಚಾರ ಪ್ರಕರಣ ಕುರಿತು ತನಿಖೆಗೆ ನಿವೃತ್ತ ಐಎಎಸ್‌ ಅಧಿಕಾರಿ ವಿನಯಕುಮಾರ್‌ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇಮಕ ಮಾಡಿದ್ದಾರೆ.

ವಿನಯಕಮಾರ್‌ ಅವರು ಕೇಂದ್ರ ಸರ್ಕಾರದ ಕಾರ್ಯದರ್ಶಿ ಹುದ್ದೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ.

ಕಾರಾಗೃಹದಲ್ಲಿ ನಡೆದಿದೆ ಎನ್ನಲಾಗಿರುವ ಅವ್ಯವಹಾರಗಳ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸುವುದಾಗಿ ಮುಖ್ಯಮಂತ್ರಿ ಹೇಳಿದ್ದರು.

ವಿನಯ್‌ಕುಮಾರ್‌ ಅವರ ಅಧ್ಯಕ್ಷತೆಯ ಸಮಿತಿ ಒಂದು ವಾರದಲ್ಲಿ ತನ್ನ ಪ್ರಾಥಮಿಕ ವರದಿ ಸಲ್ಲಿಸಲಿದ್ದು, ಒಂದು ತಿಳಗಳಲ್ಲಿ ಸಮಗ್ರ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ.

‘ಕಾರಾಗೃಹದಲ್ಲಿ ಬಂದಿಯಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ. ಶಶಿಕಲಾ ಅವರಿಗೆ ವಿಶೇಷ ಆತಿಥ್ಯ ವ್ಯವಸ್ಥೆ ಮಾಡಲು ಕಾರಾಗೃಹಗಳ ಇಲಾಖೆ ಡಿಜಿಪಿ ಎಚ್.ಎನ್. ಸತ್ಯನಾರಾಯಣರಾವ್‌ ಅವರು ₹ 2 ಕೋಟಿ ಲಂಚ ಪಡೆದಿದ್ದಾರೆ ಎಂಬ ಮಾತಿದೆ. ಈ ಬಗ್ಗೆ  ಉನ್ನತ ಮಟ್ಟದ ತನಿಖೆ ನಡೆಸಬೇಕು’ ಎಂದು ಇಲಾಖೆಯ ಡಿಐಜಿ ಡಿ. ರೂಪಾ  ಬರೆದಿದ್ದ ಪತ್ರ ವಿವಾದ ಎಬ್ಬಿಸಿದೆ.

ಇದನ್ನೂ ಓದಿ...

ಕಾರಾಗೃಹದಲ್ಲಿ ಭ್ರಷ್ಟಾಚಾರ ತನಿಖೆಗೆ ಸರ್ಕಾರದ ಆದೇಶ

ಪ್ರತಿಕ್ರಿಯಿಸಿ (+)