2018ರ ಜನವರಿಗೂ ಮುನ್ನಾ ಮಲ್ಯ ಭಾರತಕ್ಕೆ ಹಸ್ತಾಂತರ ಅಸಾಧ್ಯ
ಮಲ್ಯ ನ್ಯಾಯಾಲಯಕ್ಕೆ ಹಾಜರಾಗದೆ ಶಿಕ್ಷೆ ವಿಧಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್

ನವದೆಹಲಿ: ಭಾರತದ ಬ್ಯಾಂಕುಗಳಿಗೆ ₹ 9 ಸಾವಿರ ಕೋಟಿ ವಂಚಿಸಿರುವ ಉದ್ಯಮಿ ವಿಜಯ್ ಮಲ್ಯ ಅವರನ್ನು 2018ರ ಜನವರಿಗೂ ಮುನ್ನಾ ಭಾರತಕ್ಕೆ ಕರೆತರುವುದು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಶುಕ್ರವಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ.
ಇದಕ್ಕೆ ಪ್ರತಿಕ್ರಿಯಿಸಿರುವ ಸುಪ್ರೀಂಕೋರ್ಟ್, ಮಲ್ಯ ಗೈರುಹಾಜರಿಯಲ್ಲಿ ಅವರಿಗೆ ಶಿಕ್ಷೆ ವಿಧಿಸಲು ಸಾಧ್ಯವಿಲ್ಲ ಎಂದು ಹೇಳಿದೆ.
ವಂಚನೆ ಪ್ರಕರಣದಲ್ಲಿ ಮಲ್ಯ ತಪ್ಪಿತಸ್ಥ ಎಂದು ಸುಪ್ರೀಂಕೋರ್ಟ್ ಮೇ ತಿಂಗಳಲ್ಲಿ ಘೋಷಿಸಿತ್ತು. ಅಲ್ಲದೆ, ಜುಲೈ 10ರೊಳಗೆ ಮಲ್ಯ ನ್ಯಾಯಾಲಯದ ಮುಂದೆ ಹಾಜರಾಗಬೇಕೆಂದು ಆದೇಶದಲ್ಲಿ ತಿಳಿಸಲಾಗಿತ್ತು. ಆದರೆ, ಈ ಗಡುವು ಮುಗಿದರೂ ಮಲ್ಯ ನ್ಯಾಯಾಲಯಕ್ಕೆ ಹಾಜರಾಗಿಲ್ಲ.
‘ಮಲ್ಯ ಅವರನ್ನು ಭಾರತಕ್ಕೆ ಹಸ್ತಾಂತರಿಸುವ ಪ್ರಕರಣದ ವಿಚಾರಣೆಯು ಡಿಸೆಂಬರ್ 4ರಂದು ಬ್ರಿಟನ್‌ನ ನ್ಯಾಯಾಲಯದಲ್ಲಿ ಆರಂಭವಾಗಲಿದೆ. ಹೀಗಾಗಿ 2018ರ ಜನವರಿಗೆ ಮುಂಚಿತವಾಗಿ ಅವರನ್ನು ಭಾರತಕ್ಕೆ ಕರೆತರಲು ಸಾಧ್ಯವಿಲ್ಲ’ ಎಂದು ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಸುಪ್ರೀಂಕೋರ್ಟ್‌ಗೆ ತಿಳಿಸಿದರು.
ಪ್ರತಿಕ್ರಿಯಿಸಿ (+)