ಬುಧವಾರ, ಡಿಸೆಂಬರ್ 11, 2019
20 °C

ಶೀಘ್ರ ಶರತ್ ಹತ್ಯೆ ಆರೋಪಿಗಳ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶೀಘ್ರ ಶರತ್ ಹತ್ಯೆ ಆರೋಪಿಗಳ ಬಂಧನ

ಮಂಗಳೂರು: ಶರತ್ ಹತ್ಯೆ ಪ್ರಕರಣದಲ್ಲಿ ಮಹತ್ವದ ಸುಳಿವು ಲಭ್ಯವಾಗಿದ್ದು, ಶೀಘ್ರ ನಿಜವಾದ ಆರೋಪಿಗಳನ್ನು ಬಂಧಿಸಲಾಗುವುದು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ರೂಪಕುಮಾರ್ ದತ್ತ ತಿಳಿಸಿದರು.

ವಿಚಾರಣೆ ಸರಿಯಾದ ದಿಕ್ಕಿನಲ್ಲಿ ನಡೆಯುತ್ತಿದೆ. ಸಾಕಷ್ಟು ಮಾಹಿತಿ ಲಭ್ಯವಾಗಿದೆ. ಈವರೆಗೂ ಯಾರನ್ನು ಬಂಧಿಸಿಲ್ಲ. ಸಂಶಯ ಇದ್ದವರನ್ನು ವಿಚಾರಣೆ ಮಾಡಲಾಗುತ್ತಿದೆ ಎಂದು ಹೇಳಿದರು.

ಕಾರ್ತಿಕ್ ರಾಜ್ ಕೊಲೆ ಪ್ರಕರಣದಲ್ಲಿ 5 ತಿಂಗಳು ತನಿಖೆ ನಡೆಸಿ, ನಿಜವಾದ ಆರೋಪಿಗಳನ್ನು ಬಂಧಿಸಲಾಗಿದೆ. ಅದೇ ರೀತಿ ಶರತ್ ಪ್ರಕರಣದಲ್ಲಿಯೂ ನಿಜವಾದ ಆರೋಪಿಗಳನ್ನು ಬಂಧಿಸಲಾಗುವುದು. ನಿರಪರಾಧಿಗಳಿಗೆ ಪೊಲೀಸರು ಯಾವುದೇ ತೊಂದರೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಪ್ರತಿಕ್ರಿಯಿಸಿ (+)