ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್‌1ಎನ್‌1­ಗೆ 15 ಬಲಿ

Last Updated 14 ಜುಲೈ 2017, 20:31 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕಾಣಿಸಿಕೊಂಡಿರುವ ಎಚ್‌1ಎನ್‌1 ಜ್ವರ ಕೇವಲ ಆರು ತಿಂಗಳಲ್ಲಿ 15 ಜನರನ್ನು ಬಲಿತೆಗೆದುಕೊಂಡಿದ್ದು, ತೀವ್ರ ಆತಂಕಕ್ಕೆ  ಕಾರಣವಾಗಿದೆ. ಬೆಂಗಳೂರು, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ಕೋಲಾರ, ತುಮಕೂರು, ಬೆಳಗಾವಿ, ಹಾವೇರಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ  ಜಿಲ್ಲೆಯಲ್ಲಿ ಈ ಸೋಂಕು  ಕಾಣಿಸಿಕೊಂಡಿದೆ.

ಪ್ರಸಕ್ತ ಸಾಲಿನಲ್ಲಿ ಈವರೆಗೆ 2,429 ಜನ ಈ ಜ್ವರದಿಂದ ಬಳಲಿದ್ದಾರೆ. ಕಳೆದ ವರ್ಷ 110 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು  ಯಾರೂ ಸಾವಪ್ಪಿರಲಿಲ್ಲ.

ವೈರಸ್‌ಗಳಿಂದ ಹರಡುವ ಸೋಂಕು ಇದಾಗಿದ್ದು, ಮೊದಲಿಗೆ ಶೀತ ಮತ್ತು ಜ್ವರ ಕಾಣಿಸಿಕೊಳ್ಳುತ್ತದೆ. ರೋಗ ಉಲ್ಬಣವಾದರೆ ಉಸಿರಾಟದ ತೊಂದರೆ ಉಂಟಾಗಿ ಸಾವು ಸಂಭವಿಸುವ ಸಾಧ್ಯತೆ ಇರುತ್ತದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

‘ ಸರ್ಕಾರಿ ಆಸ್ಪತ್ರೆಗಳಲ್ಲಿ ಸೋಂಕಿತರಿಗಾಗಿ ಪ್ರತ್ಯೇಕ ವಾರ್ಡ್‌ಗಳನ್ನು ತೆರೆದು ಚಿಕಿತ್ಸೆ ನೀಡಲಾಗುತ್ತಿದೆ. ಈ ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ಆರೋಗ್ಯ ಇಲಾಖೆ ನಿರ್ದೇಶಕ ಡಾ. ಪಿ. ಎಲ್‌. ನಟರಾಜ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT