ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಇನ್ನೂ ಸಿಕ್ಕಿಲ್ಲ ಸಾಮಾಜಿಕ ನ್ಯಾಯ ’

Last Updated 14 ಜುಲೈ 2017, 20:09 IST
ಅಕ್ಷರ ಗಾತ್ರ

ಬೆಂಗಳೂರು: ‘ಪ್ರಜಾಪ್ರಭುತ್ವ ಇದ್ದರೂ ಅಲೆಮಾರಿ, ಬುಡಕಟ್ಟು, ಲಂಬಾಣಿ, ಕೊರಮ, ಕೊರವ, ಭೋವಿ ಜನಾಂಗಕ್ಕೆ ಇನ್ನೂ ಸಾಮಾಜಿಕ ನ್ಯಾಯ, ಸ್ವಾತಂತ್ರ್ಯ, ಆರ್ಥಿಕ ಸವಲತ್ತು ಸಿಕ್ಕಿಲ್ಲ’ ಎಂದು ಚಿಂತಕ ಮೂಡ್ನಾಕೂಡು ಚಿನ್ನಸ್ವಾಮಿ ಕಳವಳ ವ್ಯಕ್ತಪಡಿಸಿದರು.

ದೊಡ್ಡೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಬಂಜಾರ ಸಾಮಾಜಿಕ ಮತ್ತು ಸಾಂಸ್ಕೃತಿಕ ಅಕಾಡೆಮಿ ಶುಕ್ರವಾರ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ವಿಚಾರ ಸಂಕಿರಣ ಹಾಗೂ ಪ್ರಾತ್ಯಕ್ಷಿಕೆ ಉದ್ಘಾಟಿಸಿ ಅವರು ಮಾತನಾಡಿದರು.

‘ಅಕ್ಷರದಿಂದ ವಂಚಿತರಾದವರ ಹಕ್ಕು ಸವಲತ್ತುಗಳನ್ನು ಮೊಟಕುಗೊಳಿಸಲಾಗಿದೆ. ಸಾಮಾಜಿಕ ನ್ಯಾಯದ ಪ್ರಕಾರ ಎಲ್ಲರಿಗೂ ಸವಲತ್ತು, ಸಂಪತ್ತು, ಅಧಿಕಾರ ಸಿಗಬೇಕು. ಆದರೆ, ಹೋರಾಟ ಮಾಡಿ ಹಕ್ಕುಗಳನ್ನು ಪಡೆದುಕೊಳ್ಳಬೇಕಾಗಿದೆ’ ಎಂದರು ಹೇಳಿದರು.

ಲೇಖಕ ಯೋಗೇಶ್ ಮಾಸ್ಟರ್, ‘ಅಲೆಮಾರಿ ಮತ್ತು ಬುಡಕಟ್ಟು ಜನಾಂಗದ ಕಲೆ, ಸಾಹಿತ್ಯ, ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ. ಅದನ್ನು ಪ್ರೋತ್ಸಾಹಿಸಿ, ಉಳಿಸಿ ಬೆಳೆಸುವ ಕೆಲಸ ವನ್ನು ಮಾಧ್ಯಮ ಮಾಡಬೇಕಿದೆ’ ಎಂದು ತಿಳಿಸಿದರು.

‘ಈಗಿನ ಚಳವಳಿಗಳು ವಿಕೃತ ಭಾವನೆಯಿಂದ ಕೂಡಿವೆ. ಗೋರಕ್ಷಣೆ ಚಳವಳಿ ಮನುಷ್ಯ ವಿರೋಧಿ ಚಳವಳಿಯಾಗಿ ಪರಿವರ್ತನೆಗೊಂಡಿದೆ. ಆಹಾರ ಪದ್ಧತಿ, ಉಡುಗೆ, ಕಲೆ, ಸಂಸ್ಕೃತಿಯ ಮೇಲೆ ದಾಳಿ ನಡೆಸಿ ಯುವಜನಾಂಗದ ದಾರಿ ತಪ್ಪಿಸಲಾಗುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

ಬಂಜಾರ ಸಾಮಾಜಿಕ ಮತ್ತು ಸಾಂಸ್ಕೃತಿಕ ಅಕಾಡೆಮಿ ಅಧ್ಯಕ್ಷ ಡಾ.ಎ.ಆರ್. ಗೋವಿಂದಸ್ವಾಮಿ ಬಂಜಾರ, ‘ಅಲೆಮಾರಿ ಜನಾಂಗದ ಮಕ್ಕಳನ್ನು ಶಾಲೆಗೆ ಸೇರಿಸಲು ಜನಾಂಗದ ಪ್ರಮಾಣ ಪತ್ರ ನೀಡದೆ ಶಿಕ್ಷಣ ಇಲಾಖೆ ವಂಚಿಸುತ್ತಿದೆ’ ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT