ಸೋಮವಾರ, ಡಿಸೆಂಬರ್ 9, 2019
25 °C

ಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ಆಗ್ರಹ: ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ಆಗ್ರಹ: ಪ್ರತಿಭಟನೆ

ಬೆಂಗಳೂರು: ‘ಉತ್ತರ ತಾಲ್ಲೂಕಿನ ಅರಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವ ಸರ್ಕಾರಿ ಜಾಗವನ್ನು ತೆರವುಗೊಳಿಸಬೇಕು’ ಎಂದು ಒತ್ತಾಯಿಸಿ ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಕಾರ್ಯಕರ್ತರು ಯಲಹಂಕದ ತಾಲ್ಲೂಕು ಕಚೇರಿ ಎದುರು ಧರಣಿ ನಡೆಸಿದರು.

ಪ್ರತಿಭಟನಾಕಾರರು ಯಲಹಂಕ ಉಪನಗರದ ಕೆಎಚ್‌ಬಿ ಮೈದಾನದಿಂದ ತಾಲ್ಲೂಕು ಕಚೇರಿಯವರೆಗೆ ಮೆರವಣಿಗೆ ನಡೆಸಿದರು.

‘ಅರಕೆರೆ, ಮಾರಸಂದ್ರ, ಕಡತನಮಲೆ, ನೆಲ್ಲು ಕುಂಟೆ ಗ್ರಾಮಗಳಲ್ಲಿ ಗೋಮಾಳ, ಗುಂಡುತೋಪು, ಸ್ಮಶಾನ, ಕೆರೆಯನ್ನು ಪ್ರಭಾವಿಗಳು ಒತ್ತುವರಿ ಮಾಡಿಕೊಂಡಿದ್ದಾರೆ. ಈ ಜಾಗವನ್ನು ವಶಪಡಿಸಿಕೊಂಡು, ವಸತಿಹೀನರಿಗೆ ಮನೆ, ಸಮುದಾಯಭವನ, ತರಬೇತಿ ಕೇಂದ್ರ, ಬುದ್ಧವಿಹಾರ ನಿರ್ಮಿಸಬೇಕು’ ಎಂದು ಪಕ್ಷದ ರಾಜ್ಯ ಘಟಕದ ಸಂಯೋಜಕ ಮಾರಸಂದ್ರ ಮುನಿಯಪ್ಪ ಒತ್ತಾಯಿಸಿದರು.

‘ಭೂಕಬಳಿಕೆ ಮಾಡಿರುವ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪುಟ್ಟಶಾಮಾಚಾರಿ ಮತ್ತು ಪಿಎಲ್‌ಡಿ ಬ್ಯಾಂಕಿನ ಮಾಜಿ ನಿರ್ದೇಶಕ ಶ್ರೀನಿವಾಸ್‌ ಹಾಗೂ ಇವರಿಗೆ ಸಹಕರಿಸಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ಪ್ರತಿಕ್ರಿಯಿಸಿ (+)