ಮಂಗಳವಾರ, ಡಿಸೆಂಬರ್ 10, 2019
17 °C
ಜಮ್ಮುಕಾಶ್ಮೀರದ ಪುಲ್ವಾಮ ಜಿಲ್ಲೆಯ ಟ್ರಾಲ್ ವಲಯದಲ್ಲಿ ಗುಂಡಿನ ದಾಳಿ

ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಶ್ರೀನಗರ: ಜಮ್ಮುಕಾಶ್ಮೀರದ ಪುಲ್ವಾಮ ಜಿಲ್ಲೆಯ ಟ್ರಾಲ್ ವಲಯದಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ.

ಟ್ರಾಲ್ ವಲಯದಲ್ಲಿ ಸೇನಾ ಕಾರ್ಯಾಚರಣೆ ಮುಂದುವರೆದಿದ್ದು, ಏಳರಿಂದ ಎಂಟು ಉಗ್ರರು ಅಡಗಿರುವ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸತೂರ ಅರಣ್ಯ ವ್ಯಾಪ್ತಿಯ ಟ್ರಾಲ್ ವಲಯದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಮಾಹಿತಿ ಪಡೆದ ಭದ್ರತಾ ಪಡೆ ಉಗ್ರರ ಹುಡುಕಾಟದಲ್ಲಿ ತೊಡಗಿತ್ತು. ಆಗ ಉಗ್ರರು ಭದ್ರತಾ ಪಡೆ ಮೇಲೆ ಗುಂಡಿನ ದಾಳಿ ನಡೆಸಿದೆ.

ಆಗ ಭದ್ರತಾ ಪಡೆಯು ಪ್ರತಿದಾಳಿ ನಡೆಸಿ ಉಗ್ರರನ್ನು ಹತ್ಯೆಗೈದಿದೆ. ಇನ್ನು ಮೃತದೇಹಗಳನ್ನು ವಶಕ್ಕೆ ಪಡೆದುಕೊಳ್ಳಬೇಕಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಶುಕ್ರವಾರ ಜಮ್ಮುಕಾಶ್ಮೀರದ  ಬಂಡಿಪೊರ ಜಿಲ್ಲೆಯ ಸಂಬಾಲ್ ಪ್ರದೇಶದಲ್ಲಿ  ಶಹಬಾಜ್ ಮೀರ್ ಎಂಬ ಉಗ್ರನನ್ನು  ವಿಶೇಷ ಶಸ್ತ್ರಾಸ್ತ್ರ ಪಡೆ ಮತ್ತು 13 ರಾಷ್ಟ್ರೀಯ ರೈಫಲ್ ಪಡೆ ಬಂಧಿಸಿದೆ. ಈ ವೇಳೆ ಪಿಸ್ತೂಲ್, 4 ಗ್ರೆನೇಡ್ಸ್, ಒಂದು ಚಾಕುವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಜಮ್ಮುಕಾಶ್ಮೀರದಲ್ಲಿ ಜನವರಿಯಿಂದ ಜುಲೈವರೆಗೆ ಒಟ್ಟು 102 ಉಗ್ರರನ್ನು ಭದ್ರತಾಪಡೆ ಹತ್ಯೆಗೈದಿದೆ. ಇದು ಏಳು ವರ್ಷದ ಅವಧಿಯಲ್ಲಿ ಅತಿಹೆಚ್ಚಿನ ಸಂಖ್ಯೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಪ್ರತಿಕ್ರಿಯಿಸಿ (+)