ಶುಕ್ರವಾರ, ಡಿಸೆಂಬರ್ 6, 2019
18 °C

ನ್ಯೂಯಾರ್ಕ್‌ನಲ್ಲಿ ಅನುಷ್ಕಾ ಶರ್ಮಾ, ವಿರಾಟ್‌ ಕೊಹ್ಲಿ ಸುತ್ತಾಟ

Published:
Updated:
ನ್ಯೂಯಾರ್ಕ್‌ನಲ್ಲಿ ಅನುಷ್ಕಾ ಶರ್ಮಾ, ವಿರಾಟ್‌ ಕೊಹ್ಲಿ ಸುತ್ತಾಟ

ನ್ಯೂಯಾರ್ಕ್‌: ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಮತ್ತು ಬಾಲಿವುಡ್‌ ನಟಿ ಅನುಷ್ಕಾ ಶರ್ಮಾ ನ್ಯೂಯಾರ್ಕ್‌ನ ಬೀದಿಗಳಲ್ಲಿ ಸುತ್ತಾಡುತ್ತಿರುವ ಹಾಗೂ ಸೂಪರ್‌ ಮಾರ್ಕೆಟ್‌ನಲ್ಲಿ ಖರೀದಿ ನಡೆಸಿರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಈ ಚಿತ್ರಗಳನ್ನು ಅವರ ಅಭಿಮಾನಿಗಳು ಇನ್‌ಸ್ಟಾಗ್ರಾಮ್‌ನಲ್ಲಿ ಶುಕ್ರವಾರ ಪೋಸ್ಟ್‌ ಮಾಡಿದ್ದಾರೆ.18ನೇ ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪಾಲ್ಗೊಳ್ಳಲು ನ್ಯೂಯಾರ್ಕ್‌ಗೆ ಆಗಮಿಸಿರುವ ಅನುಷ್ಕಾ ಗುರುವಾರದಿಂದಲೇ ವಿರಾಟ್‌ ಜತೆಗೆ ಸುತ್ತಾಟ ನಡೆಸಿದ್ದಾರೆ.

ಅನುಷ್ಕಾ ಜತೆಗೆ ಕಾರಿನಲ್ಲಿ ಒಟ್ಟಿಗೆ ಕುಳಿತು ತೆಗೆದುಕೊಂಡಿರುವ ಸೆಲ್ಫಿ ಚಿತ್ರವನ್ನು ಕೊಹ್ಲಿ ಗುರುವಾರ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ.ಕೊಹ್ಲಿ ಮತ್ತು ಅನುಷ್ಕಾ ಜತೆಗೆ ಸೆಲ್ಫಿ ಕ್ಲಿಕ್ಕಿಸಿಕೊಂಡಿರುವ ಚಿತ್ರಗಳನ್ನು ಹಲವು ಅಭಿಮಾನಿಗಳು ತಂತಮ್ಮ ಇನ್‌ಸ್ಟಾಗ್ರಾಮ್‌ ಖಾತೆಗಳಲ್ಲಿ ಪೋಸ್ಟ್‌ ಮಾಡಿಕೊಂಡಿದ್ದಾರೆ.ಪ್ರತಿಕ್ರಿಯಿಸಿ (+)