ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರ ವಿಷಯದಲ್ಲಿ ಚೀನಾ ಹಸ್ತಕ್ಷೇಪ: ಮೆಹಬೂಬಾ ಮುಫ್ತಿ ಆರೋಪ

Last Updated 15 ಜುಲೈ 2017, 10:35 IST
ಅಕ್ಷರ ಗಾತ್ರ

ನವದೆಹಲಿ: ಹಿಂಸಾಚಾರ ಪೀಡಿತ ಕಾಶ್ಮೀರದ ವ್ಯವಹಾರಗಳಲ್ಲಿ ಚೀನಾ ಹಸ್ತಕ್ಷೇಪ ಮಾಡುತ್ತಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಆರೋಪಿಸಿದ್ದಾರೆ.

ಕಾಶ್ಮೀರದ ಬಿಕ್ಕಟ್ಟಿಗೆ ಸಂಬಂಧಿಸಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರ ಜತೆ ಮಾತುಕತೆ ನಡೆಸಿದ ಬಳಿಕ ಮುಫ್ತಿ ಅವರು ಈ ಹೇಳಿಕೆ ನೀಡಿದ್ದಾರೆ.

‘ಕಾಶ್ಮೀರದಲ್ಲಿ ಸದ್ಯ ಕಂಡುಬರುವ ಬಿಕ್ಕಟ್ಟು ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಸಮಸ್ಯೆಯಲ್ಲ. ಇಲ್ಲಿ ವಿದೇಶಿ ಶಕ್ತಿಗಳ ವಿರುದ್ಧ ಹೋರಾಟ ನಡೆಯುತ್ತಿದೆ. ಈ ಹಿಂದೆ ಕಾಶ್ಮೀರದಲ್ಲಿ ಬಿಕ್ಕಟ್ಟು ಸೃಷ್ಟಿಸುವುದು ಪಾಕಿಸ್ತಾನದ ಕೃತ್ಯ ಎನ್ನಲಾಗುತ್ತಿತ್ತು. ಇದೀಗ ಕಾಶ್ಮೀರ ವಿಷಯದಲ್ಲಿ ಚೀನಾ ಹಸ್ತಕ್ಷೇಪ ಮಾಡುತ್ತಿದೆ ಎಂದು ವರದಿಗಳಾಗುತ್ತಿವೆ’ ಎಂದು ಮುಫ್ತಿ ಹೇಳಿದ್ದಾರೆ.

ದೇಶದ ಬೆಂಬಲ ಅಗತ್ಯ: ಕಾಶ್ಮೀರ ವಿಷಯಕ್ಕೆ ಸಂಬಂಧಿಸಿ ಏಕಾಂಗಿ ಹೋರಾಟ ನಡೆಸಲಾಗದು. ಜಯಗಳಿಸಲು ನಮಗೆ ಇಡೀ ದೇಶದ ಮತ್ತು ಎಲ್ಲ ರಾಜಕೀಯ ಪಕ್ಷಗಳ ಬೆಂಬಲ ಬೇಕು ಎಂದೂ ಮುಫ್ತಿ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT