ಶನಿವಾರ, ಡಿಸೆಂಬರ್ 7, 2019
25 °C

ಗುಜರಾತ್: ಮಳೆಯ ಆರ್ಭಟಕ್ಕೆ ಮೂವರು ಸಾವು, 1500ಕ್ಕೂ ಹೆಚ್ಚು ಮಂದಿ ಸ್ಥಳಾಂತರ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಗುಜರಾತ್: ಮಳೆಯ ಆರ್ಭಟಕ್ಕೆ ಮೂವರು ಸಾವು, 1500ಕ್ಕೂ ಹೆಚ್ಚು ಮಂದಿ ಸ್ಥಳಾಂತರ

ಅಹಮದಾಬಾದ್: ಗುಜರಾತಿನಲ್ಲಿ ಸೌರಾಷ್ಟ್ರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ವರುಣನ ಆರ್ಭಟಕ್ಕೆ ಮೂವರು ಮೃತಪಟ್ಟಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಹಾಗೂ ಭಾರತೀಯ ವಾಯು ಪಡೆ ಸಂಕಷ್ಟದಲ್ಲಿ ಸಿಲುಕಿರುವ ಜನರ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು, ಇದುವರೆಗೆ 1500ಕ್ಕೂ ಹೆಚ್ಚು ಮಂದಿಯನ್ನು ಸುರಕ್ಷಿತವಾಗಿ ಬೇರೆಡೆಗೆ ಸ್ಥಳಾಂತರಿಸಿವೆ.

ಕಳೆದ 24 ಗಂಟೆಗಳಲ್ಲಿ ರಾಜ್ಯದ 12 ಜಿಲ್ಲೆಗಳಲ್ಲಿ 100 ಮಿ.ಮೀ. ಮಳೆಯಾಗಿದೆ. ಇಡೀ ರಾಜ್ಯದಲ್ಲಿ ಇದುವರೆಗೆ ಶೇ 33.4ರಷ್ಟು ಮಳೆಯಾಗಿದೆ. ಕಳೆದ ಬಾರಿ ಶೇ 20ರಷ್ಟು ಮಳೆಯಾಗಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಮಳೆಯ ಪ್ರಮಾಣ ಶೇ 13.4ರಷ್ಟು ಹೆಚ್ಚಾಗಿದೆ ಎಂದು ಗುಜರಾತ್‌ನ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಪಂಕಜ್ ಕುಮಾರ್ ತಿಳಿಸಿದ್ದಾರೆ.

ಮಳೆಯಿಂದಾಗಿ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ರಾಜ್‌ಕೋಟ್‌ನ 93 ಪ್ರದೇಶಗಳು ನೀರಿನಲ್ಲಿ ಮುಳುಗಿವೆ. ಸುರೇಂದ್ರನಗರ ಮತ್ತು ಲಿಂಬಿ ನಗರದ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. 124ಕ್ಕೂ ಹೆಚ್ಚು ಗ್ರಾಮಗಳ ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ.

ಭಾರೀ ಮಳೆಗೆ ನದಿಗಳು ಮೈದುಂಬಿ ಹರಿಯುತ್ತಿದ್ದು, ರಾಜ್ಯದ ಹಲವು ಅಣೆಕಟ್ಟೆಗಳು ತುಂಬಿವೆ. ಅಣೆಕಟ್ಟೆಯ ಎಲ್ಲಾ ಗೇಟ್‌ಗಳನ್ನು ತೆರೆದು ಹೆಚ್ಚುವರಿ ನೀರನ್ನು ಹೊರಬಿಡಲಾಗುತ್ತಿದೆ. ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹಮಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರತಿಕ್ರಿಯಿಸಿ (+)