ಶನಿವಾರ, ಡಿಸೆಂಬರ್ 7, 2019
16 °C

ಗಡಿಯಲ್ಲಿ ಪಾಕಿಸ್ತಾನ ಸೇನೆಯಿಂದ ಗುಂಡಿನ ದಾಳಿ; ಭಾರತೀಯ ಯೋಧ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ಗಡಿಯಲ್ಲಿ ಪಾಕಿಸ್ತಾನ ಸೇನೆಯಿಂದ ಗುಂಡಿನ ದಾಳಿ; ಭಾರತೀಯ ಯೋಧ ಸಾವು

ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಚೌರಿ ವಲಯದ ಗಡಿ ನಿಯಂತ್ರಣ ರೇಖೆಯಲ್ಲಿ ಶನಿವಾರ ಪಾಕಿಸ್ತಾನ ಸೇನೆ ಗುಂಡು ಹಾಗೂ ಷೆಲ್‌ ದಾಳಿ ನಡೆಸಿದ್ದು, ಒಬ್ಬ ಭಾರತೀಯ ಯೋಧ ಮೃತಪಟ್ಟಿದ್ದಾರೆ ಎಂದು ರಕ್ಷಣಾ ಪಡೆ ವಕ್ತಾರರು ತಿಳಿಸಿದ್ದಾರೆ.

ಪಾಕಿಸ್ತಾನದ ಸೇನೆಯ ದಾಳಿಗೆ ಪ್ರತಿದಾಳಿ ನಡೆಸಿದ ಜಮ್ಮು ಕಾಶ್ಮೀರದ ಪೂಂಚ್‌ ಜಿಲ್ಲೆಯ 35 ವರ್ಷದ ಯೋಧ ಲ್ಯಾನ್ಸ್‌ ನಾಯಕ ಮೊಹಮದ್ ನಸೀರ್‌ ಅವರು ಪಾಕ್‌ ಸೇನೆಯ ಗುಂಡಿನ ದಾಳಿಗೆ ಮೃತಪಟ್ಟಿದ್ದಾರೆ ಎಂದು ವಕ್ತಾರರು ತಿಳಿಸಿದ್ದಾರೆ.

ಪಾಕಿಸ್ತಾನ ಸೇನೆಯು ರಜೋರಿ ವಲಯದಲ್ಲಿ ಶನಿವಾರ ಮಧ್ಯಾಹ್ನ 1.30ಕ್ಕೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಭಾರತೀಯ ಸೇನೆ ಪ್ರತಿ ದಾಳಿನಡೆಸಿ ತಕ್ಕ ಉತ್ತರ ನೀಡಿದೆ ಅವರು ಹೇಳಿದ್ದಾರೆ.

ಪ್ರತಿಕ್ರಿಯಿಸಿ (+)