ಶುಕ್ರವಾರ, ಡಿಸೆಂಬರ್ 6, 2019
18 °C

ಕಲಬುರ್ಗಿಯಲ್ಲಿ ಒಂದೇ ಕುಟುಂಬದ ನಾಲ್ಕು ಮಂದಿ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿಯಲ್ಲಿ ಒಂದೇ ಕುಟುಂಬದ ನಾಲ್ಕು ಮಂದಿ ಆತ್ಮಹತ್ಯೆ

ಕಲಬುರ್ಗಿ: ಒಂದೇ ಕುಟುಂಬದ ನಾಲ್ಕು ಮಂದಿ ನೇಣು ಬಿಗಿದುಕೊಂಡು ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇಲ್ಲಿನ ಸರಸ್ವತಿ ಗೋದಾಮ ಬಡಾವಣೆಯಲ್ಲಿನ ಮನೆಯಲ್ಲಿ ನಾಲ್ಕೂ ಜನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶ್ರೀಕಾಂತ ಕಮಲಾಪೂರಕ(45), ಪತ್ನಿ ಧನಶ್ರೀ (35) ಮಗಳು ಸಾಕ್ಷಿ (17), ಮಗ ಚೇತನ (20) ಮೃತರು.

ಶ್ರೀಕಾಂತ ಭೂಗರ್ಭ ಜಲ ಪರಿಶೋಧಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಸಾಮೂಹಿಕ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ಬ್ರಹ್ಮಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಎಸ್‌ಪಿ ಶಶಿಕುಮಾರ  ಅವರು ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸಿದರು.

ಪ್ರತಿಕ್ರಿಯಿಸಿ (+)