ಸೋಮವಾರ, ಡಿಸೆಂಬರ್ 16, 2019
26 °C

ಗೋರಕ್ಷಣೆ ಹೆಸರಲ್ಲಿ ಹಿಂಸೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ರಾಜ್ಯಗಳಿಗೆ ಪ್ರಧಾನಿ ಸೂಚನೆ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಗೋರಕ್ಷಣೆ ಹೆಸರಲ್ಲಿ ಹಿಂಸೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ:  ರಾಜ್ಯಗಳಿಗೆ ಪ್ರಧಾನಿ ಸೂಚನೆ

ನವದೆಹಲಿ: ಗೋರಕ್ಷಣೆ ವಿಷಯದಲ್ಲಿ ಹಿಂಸೆ ಮಾಡುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೂಚಿಸಿದ್ದಾರೆ.

ಭಾನುವಾರ ನಡೆದ ಸರ್ವ ಪಕ್ಷಗಳ ಸಭೆಯಲ್ಲಿ ಪ್ರಧಾನಿ ಈ ಸೂಚನೆ ನೀಡಿದ್ದಾರೆ ಎಂದು ಕೇಂದ್ರ ಸಚಿವ ಅನಂತ್‌ ಕುಮಾರ್‌ ಸರ್ವಪಕ್ಷ ಸಭೆಯ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಇಂದಿನ ಸಭೆಯಲ್ಲಿ ನರೇಂದ್ರ ಮೋದಿ ಅವರು ಗೋರಕ್ಷಣೆ ಹೆಸರಲ್ಲಿ ಹಿಂಸಾಚಾರ ನಡೆಸುವುದು, ರಾಜಕೀಯ ಬಣ್ಣ ಕಟ್ಟುವ ಕೆಲಸ ಮಾಡಬಾರದು ಎಂದು ಸರ್ವಪಕ್ಷಗಳಲ್ಲಿ ಮನವಿ ಮಾಡಿದರು. ಹಿಂಸಾಚಾರ ನಡೆಸುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ರಾಜ್ಯಗಳಿಗೆ ಸೂಚನೆ ನೀಡಿದ್ದಾರೆ ಎಂದು ಅನಂತ್‌ ಕುಮಾರ್‌ ತಿಳಿಸಿದರು.

ಪ್ರತಿಕ್ರಿಯಿಸಿ (+)