ಗುರುವಾರ , ಡಿಸೆಂಬರ್ 12, 2019
17 °C
ಕಣಿವೆಗೆ ಉರುಳಿದ ವಾಹನ

16 ಮಂದಿ ಅಮರನಾಥ ಯಾತ್ರಾರ್ಥಿಗಳ ದುರ್ಮರಣ, 35 ಮಂದಿಗೆ ಗಾಯ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

16 ಮಂದಿ ಅಮರನಾಥ ಯಾತ್ರಾರ್ಥಿಗಳ ದುರ್ಮರಣ, 35 ಮಂದಿಗೆ ಗಾಯ

ಶ್ರೀನಗರ: ಅಮರನಾಥ ಯಾತ್ರೆಗೆ ತೆರಳುತ್ತಿದ್ದ ವಾಹನ ಚಾಲಕನ ನಿಯಂತ್ರಣ ತಪ್ಪಿ ಕಣಿವೆಗೆ ಬಿದ್ದ ಪರಿಣಾಮ16 ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, 35 ಮಂದಿಗೆ ಗಾಯಗಳಾಗಿವೆ.

ಜಮ್ಮು–ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಳಿಯ ರಾಮ್‌ಬನ್ ಜಿಲ್ಲೆಯ ನಾಚ್‌ನಾಲ ಕಣಿವೆ ಬಳಿ ಈ ದುರಂತ ಸಂಭವಿಸಿದೆ. 

ಸ್ಥಳಕ್ಕೆ ತಕ್ಷಣವೇ ದೌಡಾಯಿಸಿದ ಸಿಆರ್‌ಪಿಎಫ್‌ ಹಾಗೂ ವಾಯುಪಡೆ ಸಿಬ್ಬಂದಿ ಯಾತ್ರಾರ್ಥಿಗಳ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಗಾಯಗೊಂಡವರನ್ನು ಹೆಲಿಕಾಪ್ಟರ್ ಮೂಲಕ ಆಸ್ಪತ್ರೆಗೆ ರವಾನಿಸಲಾಗುತ್ತಿದೆ. ಈ ವಾಹನದಲ್ಲಿ ಒಟ್ಟು  46 ಯಾತ್ರಾರ್ಥಿಗಳು ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

‘ಈ ದುರಂತದಲ್ಲಿ 16 ಮಂದಿ ಮೃತಪಟ್ಟಿದ್ದು, 35 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ’ ಎಂದು ಜಮ್ಮುಕಾಶ್ಮೀರದ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಕೆಲವು ದಿನಗಳ ಹಿಂದೆಯಷ್ಟೇ ಅಮರನಾಥ ಯಾತ್ರೆ ಕೈಗೊಂಡಿದ್ದ ಯಾತ್ರಾರ್ಥಿಗಳ ಮೇಲೆ ಉಗ್ರರು ದಾಳಿ ನಡೆಸಿ 7 ಮಂದಿ ಯಾತ್ರಾರ್ಥಿಗಳನ್ನು ಹತ್ಯೆ ಮಾಡಿದ್ದರು.

ಪ್ರತಿಕ್ರಿಯಿಸಿ (+)